ಬೆಂಗಳೂರು: ರಾಷ್ಟ್ರಪತಿ ಭವನಕ್ಕೆ ಮನವಿ ಪತ್ರ ಸಲ್ಲಿಸಲು ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಖಂಡಿಸಿದ್ದಾರೆ.
ರಾಹುಲ್ ಹಾಗೂ ಪ್ರಿಯಾಂಕಾರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿದ ಎಸ್.ಆರ್.ಪಾಟೀಲ್ - SR Patil tweet news
ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ಮುಖಂಡರವನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಖಂಡಿಸಿದ್ದಾರೆ.
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಕೃಷಿ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಎರಡು ಕೋಟಿ ಹಸ್ತಾಕ್ಷರವಿರುವ ನಿವೇದನಾ ಪತ್ರವನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದರು ಎಂದಿದ್ದಾರೆ.
ರಾಷ್ಟ್ರಪತಿ ಭವನದತ್ತ ಕಾಲ್ನಡಿಗೆ ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ಮುಖಂಡರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತ ವಿರೋಧಿ ಕೇಂದ್ರ ಸರ್ಕಾರ ಹಾಗೂ ಪೊಲೀಸರ ಈ ದಬ್ಬಾಳಿಕೆ ಖಂಡನಾರ್ಹ ಎಂದು ಹೇಳಿದ್ದಾರೆ.