ಬೆಂಗಳೂರು:ಉಪಚುನಾವಣೆ ಹಿನ್ನೆಲೆ ವಿಧಾನ ಪರಿಷತ್ ಪ್ರರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಇಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ಕೊಟ್ಟರು. ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್.ಕುಸುಮಾ ಅವರ ಗೆಲುವಿನ ರಣತಂತ್ರದ ಕುರಿತು ಮಾತುಕತೆ ನಡೆಸಲಾಯಿತು. ಈ ವೇಳೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ಕೊಟ್ಟ ಎಸ್ಆರ್ ಪಾಟೀಲ್ ಕಾಂಗ್ರೆಸ್ ಪಾಲಿಗೆ ಈ ಕ್ಷೇತ್ರದ ಗೆಲುವು ಪ್ರತಿಷ್ಠೆಯಾಗಿದ್ದು, ಗೆದ್ದೇ ಗೆಲ್ಲಬೇಕೆಂಬ ಛಲದಿಂದ ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ಹಗಲು-ರಾತ್ರಿ ಕಾರ್ಯತಂತ್ರ ರೂಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಂದಿರುವ ಮೊದಲ ಉಪಚುನಾವಣೆ ಇದಾಗಿದೆ. ಅಲ್ಲದೆ ಒಕ್ಕಲಿಗರ ಸಂಖ್ಯೆ ಹೆಚ್ಚು ಇರುವ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಮೆರೆದು ತಾವೊಬ್ಬ ಪ್ರಬಲ ಒಕ್ಕಲಿಗ ನಾಯಕ ಎನ್ನುವುದನ್ನು ಸಾಬೀತು ಪಡಿಸಿಕೊಳ್ಳುವುದು ಡಿ ಕೆ ಶಿವಕುಮಾರ್ಗೆ ಅನಿವಾರ್ಯವಾಗಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ಕೊಟ್ಟ ಎಸ್ಆರ್ ಪಾಟೀಲ್ ಅಲ್ಲದೆ ಇವರ ಸೋದರ ಡಿ ಕೆ ಸುರೇಶ್ ಪ್ರತಿನಿಧಿಸುವ ಸಂಸತ್ ಕ್ಷೇತ್ರದ ವ್ಯಾಪ್ತಿಗೆ ಈ ವಿಧಾನಸಭಾ ಕ್ಷೇತ್ರ ಕೂಡ ಬರುತ್ತಿದ್ದು ಗೆಲುವು ಅನಿವಾರ್ಯವಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪಥನಕ್ಕೆ ಕಾರಣರಾದ 17 ಶಾಸಕರ ಪೈಕಿ ಉಳಿದುಕೊಂಡವರಲ್ಲಿ ಮುನಿರತ್ನ ಒಬ್ಬರು. ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿ ಅಭ್ಯರ್ಥಿಯಾಗಿರುವ ಮುನಿರತ್ನ ನಾಯ್ಡು ಅವರನ್ನು ಸೋಲಿಸಿ ಸೇಡು ತೀರಿಸಿಕೊಳ್ಳುವುದು ಸಹ ಕಾಂಗ್ರೆಸ್ಗೆ ಅನಿವಾರ್ಯವಾಗಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ಕೊಟ್ಟ ಎಸ್ಆರ್ ಪಾಟೀಲ್ ಈ ಹಿನ್ನೆಲೆ ಎಲ್ಲಾ ನಾಯಕರು ಒಟ್ಟಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಭರಾಟೆ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್ಆರ್ ಪಾಟೀಲ್ ಕೂಡ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಸಮಾಲೋಚನೆಗೆ ಮುಂದಾಗಿದ್ದು ಪಕ್ಷ ಗೆಲುವಿನತ್ತ ಸಾಗಲು ಇನ್ನಷ್ಟು ಹುರುಪು ತುಂಬಿದಂತಾಗಿದೆ.