ಬೆಂಗಳೂರು/ಕೆ.ಆರ್.ಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಹದೇವಪುರ ಕ್ಷೇತ್ರದ ಬೈರತಿ ಗ್ರಾಮದಲ್ಲಿ ನಡೆದ ಶ್ರೀ ನಂದಿಕೇಶ್ವರ ಸ್ವಾಮಿ ದೇವಾಲಯದ ಕುಂಭಾಭಿಷೇಕದಲ್ಲಿ ಭಾಗಿಯಾಗಿ, ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಸಚಿವ ಬೈರತಿ ಬಸವರಾಜ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿರುವುದನ್ನು ನೆನೆದು ವೇದಿಕೆಯಲ್ಲಿ ಭಾವುಕರಾದರು. ಸರ್ಕಾರಿ ಶಾಲೆಯಲ್ಲಿ ಓದಿಕೊಂಡು ಬೆಳೆದ ನಾವು ಶಾಸಕರಾಗಿ, ಮಂತ್ರಿಗಳಾಗಿ ಜನರ ಸೇವೆ ಮಾಡುತ್ತೇವೆ ಎಂದು ಕೊಂಡಿರಲಿಲ್ಲ. ಆದರೆ, ನಿಮ್ಮೆಲ್ಲರ ಆಶೀರ್ವಾದದಿಂದ ಜನರ ಸೇವೆ ಮಾಡುವಂತಾಗಿದೆ ಎಂದರು.