ಬೆಂಗಳೂರು: ಸಚಿವ ಬಿ.ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಶ್ರೀರಾಮುಲು ಬೆಂಗಳೂರಿನ ಮಲ್ಲೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯರನ್ನು ಸಚಿವ ಶ್ರೀರಾಮುಲು ಭೇಟಿ ಮಾಡಿ ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಇಂದು ದಿನವಿಡೀ ವಿವಿಧ ನಾಯಕರು, ಧಾರ್ಮಿಕ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ರು. ಶ್ರೀರಾಮುಲು ಸಂಜೆ ವೇಳೆಗೆ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿದರು.
ನಾಳೆ ಸಂಜೆ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿಯಿದ್ದು, ನಾಳೆ ಕೂಡ ಬೆಳಿಗ್ಗಿನಿಂದ ವಿವಿಧ ಮುಖಂಡರು ಭೇಟಿ ಮಾಡುವ ಸಾಧ್ಯತೆ ಇದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಇದುವರೆಗೂ ಆಸ್ಪತ್ರೆ ಕಡೆ ಸುಳಿದಿಲ್ಲ. ಇವರು ನಾಳೆ ಆಗಮಿಸುವ ನಿರೀಕ್ಷೆ ಇದೆ.