ಕರ್ನಾಟಕ

karnataka

ETV Bharat / state

ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸಚಿವ ಕೋಟ ಸೂಚನೆ - etv bharat kannada

ಈ ಯೋಜನೆಗೆ ವಾರ್ಷಿಕವಾಗಿ 800 ಕೋಟಿ ರೂ. ಲಭ್ಯವಾಗುತ್ತಿದ್ದು, ಏರಿಕೆ ಆಗಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

srinivas-poojary-instructs-for-quick-implementation-of-free-electricity-scheme
ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

By

Published : Dec 6, 2022, 7:55 PM IST

ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸ ಸೌಧದಲ್ಲಿ ಇಂದು ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ.ಜಾತಿ, ಪಂಗಡ ಸಮುದಾಯಕ್ಕೆ ಪ್ರತಿ ತಿಂಗಳು 75 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆಯ ವಾಸ್ತವಿಕ ಅನುಷ್ಠಾನ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಯೋಜನೆ ಜಾರಿಗೆ ಎದುರಾಗುವ ಅಡೆತಡೆ ನಿವಾರಿಸಲು ನಿಯಮಗಳನ್ನು ಸರಳೀಕರಿಸಬೇಕು ಎಂದು ನಿರ್ದೇಶಿಸಿದರು. ಡಿಬಿಟಿ ಹೊರತುಪಡಿಸಿ ಸರಳ ಮಾರ್ಗಗಳಲ್ಲಿ ಯೋಜನೆ ಜಾರಿ ಮಾಡಿ, ಇದಕ್ಕೆ ಪರ್ಯಾಯ ವ್ಯವಸ್ಥೆ ರೂಪಿಸುವಂತೆಯೂ ಹೇಳಿದರು.

ಎಸ್ಕಾಂಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿ ಕುಟುಂಬಗಳ ವಿದ್ಯುತ್ ಶುಲ್ಕ ವಸೂಲಿ ಮತ್ತು ಪರಿಹಾರ ಕ್ರಮಗಳಿಗೆ ಮಾರ್ಗೋಪಾಯ ಕಂಡುಕೊಳ್ಳಬೇಕು. ಆದರೆ ಯೋಜನೆಯ ತ್ವರಿತ ಅನುಷ್ಠಾನ ಇಂದಿನ ಅಗತ್ಯ. ಈ ಯೋಜನೆಗೆ ವಾರ್ಷಿಕ 800 ಕೋಟಿ ರೂ. ಲಭ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಏರಿಕೆ ಆಗಲಿದೆ ಎಂದರು.

ಸಭೆಯಲ್ಲಿ ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್ ಜಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ ರಾಕೇಶ್ ಕುಮಾರ್, ಸಲಹೆಗಾರ ಡಾ.ಇ ವಂಕಟಯ್ಯ, ಇ ಆಡಳಿತ ಇಲಾಖೆ ನಿರ್ದೇಶಕ ದಿಲೀಶ್ ಸಾಮಿ ಹಾಗೂ ಇಂಧನ ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ:ಬೆಳಗಾವಿ ಗಡಿ ವಿವಾದ.. 48 ಗಂಟೆಯೊಳಗೆ ಎರಡೂ ರಾಜ್ಯಗಳ ಸಿಎಂಗಳು ಸಮಸ್ಯೆ ಪರಿಹರಿಸಬೇಕು: ಶರದ್ ಪವಾರ್

ABOUT THE AUTHOR

...view details