ಬೆಂಗಳೂರು: ಆಸ್ಪತ್ರೆಯಿಂದಲೇ ಆಡಳಿತ ನಡೆಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಮನ ಸೆಳೆದಿದ್ದ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರು ವರ್ಕ್ ಫ್ರಂ ಹಾಸ್ಪಿಟಲ್ ಮೂಲಕ ಇಲಾಖಾ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ವರ್ಕ್ ಫ್ರಂ ಹಾಸ್ಪಿಟಲ್: ಆಸ್ಪತ್ರೆಯಲ್ಲೇ ಕಡತಗಳನ್ನು ಪರಿಶೀಲಿಸಿದ ಸಚಿವ ಶ್ರೀರಾಮುಲು
ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ನಿಂದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಲ್ಲೇ ಕಡತಗಳ ಪರಿಶೀಲನೆ ನಡೆಸಿದ್ದರು. ಇದೀಗ ಆರೋಗ್ಯ ಸಚಿವ ಬಿ.ಶ್ರೀರಾಮುಲು ಕೂಡ ಅದೇ ಹಾದಿ ಹಿಡಿದಿದ್ದು, ಆಸ್ಪತ್ರೆಯಲ್ಲಿಯೇ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ನಿಂದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಲ್ಲೇ ಕಡತಗಳ ಪರಿಶೀಲನೆ ನಡೆಸಿದ್ದರು. ಇದೀಗ ಆರೋಗ್ಯ ಸಚಿವ ಬಿ. ಶ್ರೀರಾಮುಲು ಕೂಡ ಅದೇ ಹಾದಿ ಹಿಡಿದಿದ್ದು, ಆಸ್ಪತ್ರೆಯಲ್ಲಿಯೇ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಕೊರೊನಾ ಪಾಸಿಟಿವ್ ನಿಂದಾಗಿ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸೂಕ್ತ ಸುರಕ್ಷತಾ ಕ್ರಮಗಳ ನಡುವೆ ಕೆಲವು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ತುರ್ತು ಕಡತಗಳ ವಿಲೇವಾರಿ ಮಾಡುತ್ತಿದ್ದಾರೆ.
ಅಗತ್ಯ ಸಾರ್ವಜನಿಕ ಕೆಲಸಗಳು ನಿಲ್ಲಬಾರದೆಂಬ ದೃಷ್ಟಿಯಿಂದ ಆಸ್ಪತ್ರೆಯಿಂದಲೇ ನಿರ್ವಹಿಸುತ್ತಿದ್ದೇನೆ. ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಪರಿಶೀಲನೆ ಮಾಡಲ್ಪಟ್ಟ ಕಡತಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ ನಂತರವೇ ಆಸ್ಪತ್ರೆಯಿಂದ ಹೊರಗಡೆ ಕಳುಹಿಸಿಕೊಡಲಾಗುತ್ತಿದೆ. ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಕಡತಗಳನ್ನು ಸಚಿವಾಲಯಕ್ಕೆ ಕಳುಹಿಸಿಕೊಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.