ಬೆಂಗಳೂರು: ಕಾಂಗ್ರೆಸ್ ಶಾಸಕರ ಮನೆಗಳಿಗೂ ಜನ ನುಗ್ಗುವ ಕೆಲಸ ಮಾಡ್ತಾರೆ. ಕಾಂಗ್ರೆಸ್ನವರಿಗೆ ಜನ ತಕ್ಕ ಪಾಠ ಕಲಿಸ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಗುರುವಾರ ಬಿಜೆಪಿ ಕಚೇರಿಯಲ್ಲಿ ಪರಾಜಿತ ಅಭ್ಯರ್ಥಿಗಳ ಸಭೆ ಬಳಿಕ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿಗೆ ತರಲು ಕಾಂಗ್ರೆಸ್ಗೆ ಕಷ್ಟ ಆಗ್ತಿದೆ. ಸರ್ಕಾರದ ಖಜಾನೆ ಖಾಲಿ ಆಗ್ತಿದೆ. ಉಚಿತ ಕರೆಂಟ್ ಸಿಗುತ್ತೆ ಅಂತ ನಂಬಿದ ಬಡವರಿಗೆ ಮೋಸ ಮಾಡಿದ್ದಾರೆ. ಕರೆಂಟ್ ದರ ಇನ್ನಷ್ಟು ಹೆಚ್ಚಿಗೆ ಮಾಡಿದ್ದಾರೆ. ಇದನ್ನೆಲ್ಲ ಜನ ಗಮನಿಸ್ತಿದಾರೆ ಎಂದು ಕಿಡಿ ಕಾರಿದ್ದಾರೆ.
ಗ್ಯಾರಂಟಿಗಳಲ್ಲಿ ಷರತ್ತುಗಳನ್ನು ಹಾಕಿದ್ದಾರೆ. ಇವರ ಗ್ಯಾರಂಟಿಗಳು ಜಾರಿಗೆ ಬರುವ ಲಕ್ಷಣ ಕಾಣಿಸ್ತಿಲ್ಲ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ. ಉಚಿತವಾಗಿ ಗ್ಯಾರಂಟಿಗಳನ್ನು ಕೊಡ್ತೀವಿ ಅಂತ ಹೇಳಿ ಷರತ್ತುಗಳನ್ನು ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಜನ ಸುಮ್ಮನಿರಲ್ಲ. ಜನ ಬೀದಿಗೆ ಇಳಿದು ತಮ್ಮ ಹಕ್ಕುಗಳನ್ನು ಪಡೆದುಕೊಳ್ತಾರೆ ಎಂದು ಎಚ್ಚರಿಕೆ ನೀಡಿದರು.
ಪಂಚ ಯೋಜನೆ ಪ್ರತಿ ಮನೆಗೆ ತಲುಪಿಸುವ ಕೆಲಸ ಮಾಡುವೆ ಪ್ರದೀಪ್ ಈಶ್ವರ್:ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸ ಮಾಡುವುದಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗುರುವಾರ ಹೇಳಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಾದ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮನೆ ಯಜಮಾನಿಗೆ 2 ಸಾವಿರ, ಉಚಿತ ವಿದ್ಯುತ್, 10 ಕೆಜಿ ಅಕ್ಕಿ ವಿತರಣೆ, ಯುವನಿಧಿ ಯೋಜನೆಗಳನ್ನು ಪ್ರತಿ ಮನೆಗೂ ತಲುಪಿಸುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ.