ಕರ್ನಾಟಕ

karnataka

ETV Bharat / state

ಶತಾಯುಷಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆಗೆ ಸ್ಪಂದನೆ:  ಶ್ರೀರಾಮುಲು ಸ್ಪಷ್ಟನೆ - Sriramulu tweet about Saalumarada Thimmakka health

ಶತಾಯುಷಿ ಸಾಲುಮರದ ತಿಮ್ಮಕ್ಕ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸಲು ಸೂಚಿಸಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

Saalumarada Thimmakka
ಶತಾಯುಷಿ ಸಾಲುಮರದ ತಿಮ್ಮಕ್ಕ

By

Published : May 22, 2020, 10:58 PM IST

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿರುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಬಂದ ತಕ್ಷಣ ಹಾಸನ‌ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆಸ್ಪತ್ರೆಗೆ ತೆರಳಿ ತಿಮ್ಮಕ್ಕನವರ ಆರೋಗ್ಯದ ಬಗ್ಗೆ ಮುತುವರ್ಜಿ ವಹಿಸಲು ಸೂಚಿಸಲಾಗಿತ್ತು.

ಸಚಿವ ರಾಮುಲು ಟ್ವಿಟ್

ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ತಿಮ್ಮಕ್ಕರನ್ನು ಭೇಟಿಯಾಗಿದ್ದಾರೆ. ಹಾಗೆಯೇ ಆಸ್ಪತ್ರೆಯ ವೈದ್ಯರಿಂದ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ತಿಮ್ಮಕ್ಕ ಅವರು ಚಿಕಿತ್ಸೆಗೆ ಸ್ಪಂದಿಸಿದ್ದು, ಆರೋಗ್ಯ ಸ್ಥಿರವಾಗಿದೆ. ತಿಮ್ಮಕ್ಕ ಅವರು ಹಾಸನ ಜಿಲ್ಲೆಯಲ್ಲಿ ಇರುವಷ್ಟು ದಿನ ಅವರ ಆರೋಗ್ಯ ತಪಾಸಣೆಗೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಸಚಿವ ರಾಮುಲು ಟ್ವೀಟ್​ ಮಾಡಿದ್ದಾರೆ.

ABOUT THE AUTHOR

...view details