ಕರ್ನಾಟಕ

karnataka

ETV Bharat / state

ಎಸ್ಎಸ್ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ.. - SSLC Exam Date Change

ಎಸ್ಎಸ್ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಎರಡು ಬದಲಾವಣೆ ಮಾಡಿ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆಗೊಳಿಸಿದೆ.

Karnataka Board of Secondary Education Examination
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ

By

Published : Jan 19, 2023, 7:03 AM IST

ಬೆಂಗಳೂರು:2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಹಾವೀರ ಜಯಂತಿಯ ಅಂಗವಾಗಿ ಏಪ್ರಿಲ್ 4 (2023) ರಂದು ಸರ್ಕಾರಿ ರಜೆ ಇದ್ದು ಅಂದು ನಡೆಯಬೇಕಿದ್ದ ಗಣಿತ ಮತ್ತು ಸಮಾಜಶಾಸ್ತ್ರ ವಿಷಯದ ಪರೀಕ್ಷೆಯನ್ನು ಏಪ್ರಿಲ್ 3ರಂದು ನಿಗದಿಪಡಿಸಲಾಗಿದೆ. ವಾರ್ಷಿಕ ಪರೀಕ್ಷೆಯು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿದೆ.

ಮೊದಲು ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಏಪ್ರಿಲ್ 4 ರಂದು ಗಣಿತ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆ ನಿಗದಿಯಾಗಿತ್ತು. ಆದರೆ ಏಪ್ರಿಲ್ 4 ರಂದು ಮಹಾವೀರ ಜಯಂತಿಗೆ ಸರ್ಕಾರಿ ರಜೆ ಘೋಷಿಸಿರುವುದರಿಂದ ಅಂದು ನಡೆಯಬೇಕಿರುವ ಗಣಿತ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಯನ್ನು ಒಂದು ದಿನ ಮೊದಲೇ ನಡೆಯಲು ನಿರ್ಧರಿಸಿದ್ದು ಏಪ್ರಿಲ್ 4 ರ ಬದಲು ಏಪ್ರಿಲ್ 3 ರಂದೇ ಈ ವಿಷಯಗಳ ಪರೀಕ್ಷೆ ನಡೆಯಲಿದೆ. ಇದೊಂದು ಬದಲಾವಣೆ ಹೊರತುಪಡಿಸಿ ಈ ಹಿಂದೆ ಹೊರಡಿಸಲಾಗಿದ್ದ ಅಂತಿಮ ವೇಳಾಪಟ್ಟಿಯಂತೆ ಇತರ ವಿಷಯಗಳ ಪರೀಕ್ಷೆ ನಿಗದಿಯಾಗಿದೆ.

ಬದಲಾವಣೆಯ ನಂತರದ ಅಂತಿಮ ವೇಳಾಪಟ್ಟಿ

ಇದನ್ನೂ ಓದಿ:ಪಿಯುಸಿಯಲ್ಲಿ 99ರಷ್ಟು ಅಂಕ ಗಳಿಸಿದ್ದ ಮುಮುಕ್ಷಾ ಜೈನ ಸನ್ಯಾಸ ದೀಕ್ಷೆ.. ಅದ್ಧೂರಿ ಶೋಭಾಯಾತ್ರೆ

ಪರಿಷ್ಕೃತ ವೇಳಾಪಟ್ಟಿ ಹೀಗಿದೆ:ಮಾರ್ಚ್‌ 31ರಂದು ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ಪರೀಕ್ಷೆ ನಡೆಯಲಿದೆ. ಏಪ್ರಿಲ್‌ 3 ರಂದು ಗಣಿತ ಶಾಸ್ತ್ರ, ಸಮಾಜ ಶಾಸ್ತ್ರ. ಏಪ್ರಿಲ್ 6 ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ.
ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.
ಏಪ್ರಿಲ್‌ 12 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ. ಏಪ್ರಿಲ್‌ 15 ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿಯಾಗಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದೆ. ಬೆಳಗ್ಗೆ 10-30 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯುತ್ತದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ1.45ರವರೆಗೆ ಮತ್ತು ದ್ವಿತೀಯ, ತೃತೀಯ ಬಾಷೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಅವಧಿ ನೀಡಲಾಗಿದೆ.

ಇದನ್ನೂ ಓದಿ:ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ

ABOUT THE AUTHOR

...view details