ಕರ್ನಾಟಕ

karnataka

ETV Bharat / state

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಬಿಎಸ್​ವೈ - CM Yeddyurappa news

ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ ಮತ್ತು ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಸಿಎಂ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಬಿಎಸ್​ವೈ
ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಬಿಎಸ್​ವೈ

By

Published : Jun 24, 2020, 6:17 PM IST

ಬೆಂಗಳೂರು: ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿ ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮೂಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ. ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ, ಸರ್ಕಾರ ಪರೀಕ್ಷೆ ನಡೆಸಲು ಹೊರಟಿರುವ ಮಾರ್ಗಸೂಚಿಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ ಮತ್ತು ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಸಿಎಂ ಟ್ವೀಟ್ ಮಾಡಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

ABOUT THE AUTHOR

...view details