ಬೆಂಗಳೂರು: ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿರುವುದು ಆರೋಗ್ಯಕರ ಬೆಳವಣಿಗೆ. ಮಕ್ಕಳು-ಪೋಷಕರು, ಶಿಕ್ಷಕರು ಕೋವಿಡ್ನಿಂದ ನರಳುತ್ತಿದ್ದು ಈ ಪರಿಸ್ಥಿತಿಯಲ್ಲಿ ಆರೋಗ್ಯವೇ ಮುಖ್ಯ ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ರಾಜ್ಯ ಸಂಘಟನೆಯ (ಕ್ಯಾಮ್ಸ್) ಮುಖ್ಯ ಕಾರ್ಯದರ್ಶಿ ಶಶಿಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ಶಶಿಕುಮಾರ್, ರಾಜ್ಯದಲ್ಲಿ ಕೊರೊನಾ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಲಾಗಿತ್ತು. ಬಳಿಕ ನಿನ್ನೆಯಷ್ಟೇ ಎಸ್ಎಸ್ಎಲ್ಸಿ ಪರೀಕ್ಷೆಯನ್ನೂ ಮುಂದೂಡಿರುವ ಕುರಿತು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಆದರೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಲೇಬೇಕಾಗುತ್ತದೆ. ಸಿಬಿಎಸ್ಸಿ, ಐಸಿಎಸ್ಇ ಮಾನದಂಡಗಳಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಲ್ಲ.