ಬೆಂಗಳೂರು:ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.
ಫೆಬ್ರವರಿ 21ರಿಂದ 26ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ. ನಿಗದಿತ ದಿನದಂದು ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಲಿದ್ದು, ಕೋವಿಡ್ ನಿಯಮಗಳ ಅನುಸಾರವಾಗಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
ಇದನ್ನೂ ಓದಿ:ಕೊಟ್ಟ ಸಾಲ ವಾಪಸ್ ಕೇಳಿದ ಮಹಿಳೆ ಮೇಲೆ ಶೂಟೌಟ್, ಕೊಲೆ: ಸಂಕೇಶ್ವರ ಪುರಸಭೆ ಬಿಜೆಪಿ ಸದಸ್ಯ ಅರೆಸ್ಟ್
ವೇಳಾಪಟ್ಟಿ ಇಂತಿದೆ:
- ಫೆಬ್ರವರಿ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ
- ಫೆ.22: ಸಮಾಜ ವಿಜ್ಞಾನ
- ಫೆ.23: ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
- ಫೆ.24: ಗಣಿತ
- ಫೆ.25: ತೃತೀಯ ಭಾಷೆಯಾಗಿ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
- ಫೆ.26ರಂದು ವಿಜ್ಞಾನ
ಜಾಹೀರಾತು:ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ