ಬೆಂಗಳೂರು: ಈಜಲು ಹೋಗಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕಲ್ಲು ಕ್ವಾರಿಯಲ್ಲಿ ಈಜಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು - ಬೆಂಗಳೂರು
ಬೆಂಗಳೂರಿನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.
![ಕಲ್ಲು ಕ್ವಾರಿಯಲ್ಲಿ ಈಜಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು](https://etvbharatimages.akamaized.net/etvbharat/prod-images/768-512-4594921-thumbnail-3x2-brm.jpg)
ಈಜಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು
ಈಜಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು
ಶಭಾಷ್ (16) ಮೃತ ದುರ್ದೈವಿ. ಬಿಸಿಲಿನ ತಾಪಕ್ಕೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಪಕ್ಕದ ಪಿಲ್ಲಗಾನಹಳ್ಳಿ ಕಲ್ಲಿನ ಕ್ವಾರಿಯಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ.
ಬಾಲಕನಿಗಾಗಿ ಅಗ್ನಿಶಾಮಕ ದಳ ಹಾಗೂ ತಲಘಟ್ಟಪುರ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪಿಲ್ಲಗಾನಹಳ್ಳಿಯ ಮೃತನ ಮನೆಯಲ್ಲಿ ಮಗನ ಕಳೆದುಕೊಂಡ ದುಃಖ ಮಡುಗಟ್ಟಿದೆ.