ಬೆಂಗಳೂರು:ಕೊರೊನಾ ತೀವ್ರತೆ ಹಿನ್ನೆಲೆಯಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಿಂದೇಟು ಹಾಕಿದರು. ಹೀಗಾಗಿ, ಮುಂದಿನ ಸಲ ಪರೀಕ್ಷೆ ಬರೆಯಲು ಇಲಾಖೆ ಅವಕಾಶ ಕಲ್ಪಿಸಿಕೊಟ್ಟಿತ್ತು. ಅದರಂತೆ ಸೆಪ್ಟೆಂಬರ್ 27-29ರಂದು ರಾಜ್ಯಾದ್ಯಂತ 352 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ಮುಗಿದಿದೆ.
ಹೊಸ ವಿದ್ಯಾರ್ಥಿಗಳು, ಖಾಸಗಿ ವಿದ್ಯಾರ್ಥಿಗಳು ಎಲ್ಲ ಸೇರಿ ಒಟ್ಟು 53,125 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ 2ನೇ ದಿನವಾದ ಇಂದು ಭಾಷಾ ವಿಷಯಕ್ಕೆ 50,419 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 2,706 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ: