ಬೆಂಗಳೂರು: ವಿವಿಧ ರೈತ ಸಂಘಟನೆಗಳು ಇದೇ ತಿಂಗಳು 28ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
ಕರ್ನಾಟಕ ಬಂದ್ ಹಿನ್ನೆಲೆ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆ
ಸೆಪ್ಟೆಂಬರ್ 28ಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಅದೇ ದಿನ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ, ಸೆಪ್ಟೆಂಬರ್ 29ಕ್ಕೆ ಪರೀಕ್ಷೆ ನಡೆಸುವುದಾಗಿ ಪರೀಕ್ಷಾ ಮಂಡಳಿ ತಿಳಿಸಿದೆ.
ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ
ಸೆಪ್ಟೆಂಬರ್ 28 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ವಿಷಯದ ಪರೀಕ್ಷೆಗಳನ್ನು ನಡೆಸಲು ಈ ಹಿಂದೆ ನಿಗದಿಪಡಿಸಲಾಗಿದ್ದು, ಇದೀಗ ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಕಾರಣದಿಂದಾಗಿ ಪರೀಕ್ಷೆಯನ್ನು ಸೆಪ್ಟೆಂಬರ್ 29ಕ್ಕೆ ನಡೆಸಲು ಪರೀಕ್ಷಾ ಮಂಡಳಿ ನಿರ್ಧರಿಸಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ಪರೀಕ್ಷೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.