ಕರ್ನಾಟಕ

karnataka

ETV Bharat / state

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ವೆಬ್​ಸೈಟ್​ನಲ್ಲಿ ಲಭ್ಯ: ಶೇ.39.59 ವಿದ್ಯಾರ್ಥಿಗಳು ಉತ್ತೀರ್ಣ - ನಾಳೆ ಮಧ್ಯಾಹ್ನ 12 ಗಂಟೆ ನಂತರ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯ

ನಾಳೆ ಮಧ್ಯಾಹ್ನ 12 ಗಂಟೆ ನಂತರ https://karresults.nic.in/ ವೆಬ್​ಸೈಟ್​ನಲ್ಲಿ ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ದೊರೆಯಲಿದೆ.

SSLC Supplementary Exam Result Declared tomorrow Available on website
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ವೆಬ್​ಸೈಟ್​ನಲ್ಲಿ ಲಭ್ಯ

By

Published : Jul 20, 2022, 8:13 PM IST

ಬೆಂಗಳೂರು :ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು ನಾಳೆ ವೆಬ್​​ಸೈಟ್​​ ಮೂಲಕ ವೀಕ್ಷಿಸಬಹುದಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ನೋಡಬಹುದು.

2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆ ನಂತರ https://karresults.nic.in/ ಈ ವೆಬ್‌ಸೈಟ್‌ನಲ್ಲಿಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ರಸ್ತೆ ಅಪಘಾತದಲ್ಲಿ ಶೇ.95ರಷ್ಟು ದೇಹ ನಿಷ್ಕ್ರಿಯ.. ಹಾಸಿಗೆ ಹಿಡಿದರೂ ಆನ್​ಲೈನ್​ ಪಾಠ ಮಾಡ್ತಾರೆ ಈ ವಕೀಲ!

ABOUT THE AUTHOR

...view details