ಬೆಂಗಳೂರು:ರಾಜ್ಯದಾದ್ಯಂತ ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಆನ್ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದು. ಇದಕ್ಕಾಗಿ ಮೇ 30ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ ಬರೆದು ಫೇಲ್ ಆದ ಅಭ್ಯರ್ಥಿಗಳು ಹಾಗೂ ಈ ಹಿಂದಿನ ಎಲ್ಲ ಅರ್ಹ ಪುನರಾವರ್ತಿತ ಅಭ್ಯರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದು. 2002-03ರಿಂದ 2021- 22ರ ಮುಖ್ಯ ಪರೀಕ್ಷೆವರೆಗೆ ಮತ್ತು 2002-2003ಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಬಹುದು.
ಬೆಳಗ್ಗೆ 10:30ರಿಂದ 1:45ರ ತನಕ ಪರೀಕ್ಷೆ ನಡೆಯಲಿದ್ದು, ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನ ನೀಡಲಾಗುತ್ತೆ. ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ..
- 27-6-2022- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ
- 28-6-2022- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
- 29-6-2022- ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
- 30-6-2022- ಸಮಾಜ ವಿಜ್ಞಾನ
- 01-7-2022- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಹಾಗೂ ಎನ್ಎಸ್ಕ್ಯೂಎಫ್ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್
- 02-7-2022- ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್
- 04-7-2022- ಗಣಿತ, ಸಮಾಜಶಾಸ್ತ್ರ