ಬೆಂಗಳೂರು:ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೊರೊನಾ ಆತಂಕದ ನಡುವೆಯು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 21ರಿಂದ 29 ರವರೆಗೆ 772 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶಾಲಾ ಅಭ್ಯರ್ಥಿಗಳು 3354, ಪುನರಾವರ್ತಿತ 1,93,370, ಖಾಸಗಿ 1759, ಪುನರಾವರ್ತಿತ ಖಾಸಗಿ 15,472 ಜನ ಪರೀಕ್ಷೆ ಬರೆದಿದ್ದರು.
ಉತ್ತರ ಪತ್ರಿಕೆಗಳ ಮೌಲ್ಯಮಾಪಕ್ಕೆ ಅಕ್ಟೋಬರ್ 7ರಿಂದ 13ರ ವರೆಗೆ 84 ಮೌಲ್ಯಮಾಪನ ಕೇಂದ್ರಗಳಲ್ಲಿ 13,834 ಮೌಲ್ಯಮಾಪಕರನ್ನು ನಿಯೋಜಿಸಲಾಗಿತ್ತು. ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು kseeb.kar.nic.in ಅಥವಾ karresults.nic.in ನಲ್ಲಿ ಪರೀಕ್ಷಾ ಫಲಿತಾಂಶ ನೋಡಬಹುದು.