ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್​ಸಿ ಫಲಿತಾಂಶ ನಾಳೆ ಪ್ರಕಟವಾಗಲ್ಲ..! - ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟ ದಿನಾಂಕ

ನಾಳೆ ಪ್ರಕಟವಾಗಬೇಕಿದ್ದ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶದ ದಿನಾಂಕ ಮೂಂದೂಡಲಾಗಿದೆ. ಈಗಾಗಲೇ ಫಲಿತಾಂಶದ ವರದಿ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಕೈ ಸೇರಿದ್ದು, ನಾಳೆ ಸಿಎಂ ಭೇಟಿ ಮಾಡಿ ಚರ್ಚಿಸಿ ದಿನಾಂಕ ಪ್ರಕಟಿಸಲಿದ್ದಾರೆ.

sslcc-result-publish
ಎಸ್ಎಸ್ಎಲ್​ಸಿ ಫಲಿತಾಂಶ

By

Published : Aug 6, 2021, 10:17 PM IST

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಬಹುತೇಕ ನಾಳೆ ಪ್ರಕಟವಾಗಬೇಕಿತ್ತು. ಆದರೆ, ತಾಂತ್ರಿಕ‌ ಕಾರಣದಿಂದಾಗಿ ಫಲಿತಾಂಶ ಪ್ರಕಟ ದಿನಾಂಕ ಮುಂದೂಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.‌

ಈ ಕುರಿತು ಮಾಹಿತಿ ನೀಡಿರುವ ಪ್ರೌಢ ಪರೀಕ್ಷಾ ಮಂಡಳಿ ನಿರ್ದೇಶಕಿ ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ, ಶೀಘ್ರದಲ್ಲೇ ದಿನಾಂಕ ತಿಳಿಸಲಾಗುವುದು ಎಂದು ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಈ ಹಿಂದೆಯೇ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಈ ಹಿಂದಿನ ಸಚಿವರು ತಿಳಿಸಿದ್ದರು. ಆದರೆ, ಇದೀಗ ಶಿಕ್ಷಣ ಸಚಿವರು ಇಲ್ಲದೇ ಇರುವ ಕಾರಣಕ್ಕೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಯಲಿದೆ.

ಈಗಾಗಲೇ ಫಲಿತಾಂಶದ ವರದಿ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಕೈ ಸೇರಿದ್ದು, ನಾಳೆ ಸಿಎಂ ಭೇಟಿ ಮಾಡಿ ಚರ್ಚಿಸಿ ದಿನಾಂಕ ಪ್ರಕಟಿಸಲಿದ್ದಾರೆ. ಮಾಹಿತಿ ಪ್ರಕಾರ ಸೋಮವಾರ ಅಥವಾ ಮಂಗಳವಾರ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ABOUT THE AUTHOR

...view details