ಕರ್ನಾಟಕ

karnataka

ETV Bharat / state

ತಳವಾರ ಸಮುದಾಯಕ್ಕೆ ST ಜಾತಿ ಪ್ರಮಾಣ ಪತ್ರ: ನಿಯೋಗಕ್ಕೆ ಸಿಎಂ ಭರವಸೆ

ಶಾಣಪ್ಪ ಪೀರಪ್ಪ ಕಣಮೇಶ್ಚರ ನೇತೃತ್ವದ ನಿಯೋಗ, ಇಂದು ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಸೂಕ್ತ ದಾಖಲಾತಿ ದಾಖಲಾತಿ ಒದಗಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗಳು ಎಸ್.ಟಿ ಪ್ರಮಾಣ ಪತ್ರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Oct 20, 2021, 10:18 PM IST

ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ತಳವಾರ ಸಮುದಾಯಕ್ಕೆ ಎಸ್.ಟಿ ಪ್ರಮಾಣಪತ್ರ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ತಳವಾರ ಸಮುದಾಯದ ನಿಯೋಗದ ನೇತೃತ್ವ ವಹಿಸಿದ್ದ ಶಾಣಪ್ಪ ಪೀರಪ್ಪ ಕಣಮೇಶ್ವರ ತಂಡ ಮುಖ್ಯಮಂತ್ರಿಗಳ ನಿವಾಸದಲ್ಲಿ ಇಂದು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆ ಕೊಟ್ಟಿದ್ದಾರೆ.

ಸಿಎಂ ಬೊಮ್ಮಾಯಿ ಸಿಂದಗಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಳವಾರ ಸಮುದಾಯದ ಮುಖಂಡರು ತಳವಾರ ಜನಾಂಗಕ್ಕೆ ಕೇಂದ್ರ ಸರ್ಕಾರದ ಆದೇಶದಂತೆ ಎಸ್‌ಟಿ. ಪ್ರಮಾಣ ಪತ್ರ ನೀಡಬೇಕೆಂದು ಒತ್ತಡ ಹೇರಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಸೂಕ್ತ ದಾಖಲಾತಿಯೊಂದಿಗೆ ಸಮುದಾಯದ ನಿಯೋಗ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ತಿಳಿಸಿದ್ದರು.

ಈ ಹಿನ್ನಲೆಯಲ್ಲಿ ಶಾಣಪ್ಪ ಪೀರಪ್ಪ ಕಣಮೇಶ್ಚರ ನೇತೃತ್ವದ ನಿಯೋಗ, ಇಂದು ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಸೂಕ್ತ ದಾಖಲಾತಿ ದಾಖಲಾತಿ ಒದಗಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗಳು ಎಸ್.ಟಿ ಪ್ರಮಾಣ ಪತ್ರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಳವಾರ ಸಮಾಜದ ಅಧ್ಯಕ್ಷ ಶಾಣಪ್ಪ ಪೀರಪ್ಪ ಕಣಮೇಶ್ವರ್, ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ಈಗಾಗಲೇ STಗೆ ಸೇರಿಸಬೇಕೆಂದು ಆದೇಶವಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ವಿಳಂಬ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಗಳನ್ನು ಸಿಂದಗಿ ಉಪ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಭೇಟಿ ಮಾಡಿ ಒತ್ತಡ ಹೇರಲಾಗಿತ್ತು‌.

ಮುಖ್ಯಮಂತ್ರಿಗಳ ಭರವಸೆಯಂತೆ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಪ್ರಮಾಣ ಪತ್ರ ನೀಡುವ ಬಗ್ಗೆ ಸಕರಾತ್ಮಕ ಭರವಸೆ ನೀಡಿದ್ದಾರೆ. ಈ ಬಾರಿಯ ಉಪ ಚುನಾವಣೆ ಯಲ್ಲಿ ತಳವಾರ ಸಮುದಾಯ ಅವರಿಗೆ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ABOUT THE AUTHOR

...view details