ಕರ್ನಾಟಕ

karnataka

ETV Bharat / state

ಸಹಕಾರಿ ಬ್ಯಾಂಕ್​ಗಳಲ್ಲಿ ಐದು ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ: ಸಚಿವ ಎಸ್.ಟಿ. ಸೋಮಶೇಖರ್

ಇಲಾಖೆ ವ್ಯಾಪ್ತಿಗೊಳಪಡುವ ವಿವಿಧ ಬ್ಯಾಂಕ್​​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

somshekharsomshekhar
somshekhar

By

Published : Mar 2, 2021, 10:04 PM IST

ಬೆಂಗಳೂರು: ಸಹಕಾರಿ ಇಲಾಖೆಗೊಳಪಡುವ ಎಲ್ಲಾ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಸುಮಾರು ಐದು ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಕರ್ನಾಟಕ ಸಹಕಾರ ಮಹಾಮಂಡಳ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ ಜಂಟಿಯಾಗಿ ಇಂದು ಹಮ್ಮಿಕೊಂಡಿದ್ದ ಸಮೂಹ ಮಾಧ್ಯಮಗಳ ಪ್ರತಿನಿಧಿಗಳಿಗೆ ಸಹಕಾರ ಜಾಗೃತಿ ಚಿಂತನ-ಮಂಥನ ಕುರಿತ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಚಾಲನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಹಕಾರ ಜಾಗೃತಿ ಚಿಂತನ-ಮಂಥನ ವಿಶೇಷ ಕಾರ್ಯಕ್ರಮ

ರಾಜ್ಯದಲ್ಲಿ 4 ಕಂದಾಯ ವಿಭಾಗಗಳಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 39 ಸಾವಿರ ಕೋಟಿ ರೂ.ಗಳನ್ನು ಸರ್ಕಾರಿ ಇಲಾಖೆ ಮೂಲಕ ನೀಡಲಾಗಿದೆ. ವಸತಿ ಸೇರಿದಂತೆ ಹಲವು ಯೋಜನೆಗಳು ಸಹಕಾರಿ ರಂಗದಲ್ಲಿದ್ದು, ಇದರ ಪ್ರಯೋಜನ ಪಡೆಯಬೇಕು. ಎಲ್ಲಾ ಕ್ಷೇತ್ರಗಳಲ್ಲೂ ಸಹಕಾರಿ ರಂಗ ಮುಂಚೂಣಿಯಲ್ಲಿದೆ. ಇಲಾಖೆ ಮನೆಯಿಂದ ದೊರೆಯುವ ತರಬೇತಿ ಪಡೆದು ಸಹಕಾರಿ ಬ್ಯಾಂಕು, ಸಂಘ-ಸಂಸ್ಥೆ ಸ್ಥಾಪನೆ ಮಾಡಬಹುದಾಗಿದೆ ಎಂದು ಹೇಳಿದರು.

ಕೋವಿಡ್ ಮತ್ತು ಲಾಕ್​ಡೌನ್ ಸಂದರ್ಭದಲ್ಲಿ ಆರೋಗ್ಯವನ್ನು ಲೆಕ್ಕಿಸದೆ ಪತ್ರಕರ್ತರು ಜನರಿಗೆ ಮಾಹಿತಿ ಒದಗಿಸಿದ್ದಾರೆ. ಪತ್ರಕರ್ತರು ಕೂಡಾ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸಾಕಷ್ಟು ನೋವು ಅನುಭವಿಸಿದರೂ ವಿಶ್ವಾಸದಿಂದ ಕೆಲಸ ಮಾಡುತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲದ ಆಡಳಿತಾಧಿಕಾರಿ ವೈ.ಎಚ್.ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಎನ್.ಎಸ್.ಅರುಣ್ ಕುಮಾರ್‌, ಕಾರ್ಯದರ್ಶಿ ಲಕ್ಷ್ಮೀಪತಯ್ಯ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ರಾಜೇಂದ್ರಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details