ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಅಮೆರಿಕ ರಾಯಭಾರಿ ಕಚೇರಿ ಆರಂಭಿಸಿ: ಕರಂದ್ಲಾಜೆ ಮನವಿ! - kannada news

ರಾಜ್ಯದಲ್ಲಿ ಅಮೆರಿಕ ರಾಯಭಾರಿ ಕಚೇರಿ ಆರಂಭಿಸುವಂತೆ ಕೇಂದ್ರ ವಿದೇಶಾಂಗ ಇಲಾಖೆಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಆರಂಭಿಸಿ: ಶೋಭಾ ಕರಂದ್ಲಾಜೆ ಮನವಿ!

By

Published : Jul 17, 2019, 8:22 PM IST

ಬೆಂಗಳೂರು: ರಾಜ್ಯದಲ್ಲಿ ಅಮೆರಿಕ ರಾಯಭಾರಿ ಕಚೇರಿಯನ್ನು ಆರಂಭಿಸುವಂತೆ ಕೇಂದ್ರ ವಿದೇಶಾಂಗ ಇಲಾಖೆಗೆ ಸಂಸದೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಇಂದು ಭೇಟಿ ಮಾಡಿದರು. ರಾಜ್ಯದ ಹಲವು ವರ್ಷಗಳ ಬೇಡಿಕೆಯಾಗಿರುವ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರಿ ಕಚೇರಿಯನ್ನು ಆರಂಭಿಸುವಂತೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ABOUT THE AUTHOR

...view details