'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾಗೆ ರಾಜ್ಯ ಪ್ರಶಸ್ತಿ ಬಂದಿರುವುದಕ್ಕೆ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಪ್ರಶಸ್ತಿ ಪಡೆದ 'ಸ.ಹಿ.ಪ್ರಾ.ಶಾಲೆ' ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದೇನು? - ಬೆಂಗಳೂರು ನಿರ್ದೇಶಕ ರಿಷಬ್ ಶೆಟ್ಟಿ
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಸಿನಿಮಾಗೆ ರಾಜ್ಯ ಪ್ರಶಸ್ತಿ ಬಂದಿರುವುದಕ್ಕೆ ನಿರ್ದೇಶಕ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. 'ಈ ಪ್ರಶಸ್ತಿ ನನಗೆ ದೊಡ್ಡದಾದ ಜವಾಬ್ದಾರಿಯನ್ನು ಹೊರೆಸಿದೆ. ಅದನ್ನು ಶ್ರದ್ಧೆಯಿಂದ ಮುಂದುವರಿಸಿಕೊಂಡು ಹೋಗುತ್ತೇನೆ' ಎಂದರು.
ರಿಷಬ್ ಶೆಟ್ಟಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರ ಕೊನೆಯಲ್ಲಿ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಬಂದಿತ್ತು. ಇದೀಗ 2020ರ ಆರಂಭದಲ್ಲಿ ರಾಜ್ಯ ಪ್ರಶಸ್ತಿ ಬಂದಿದೆ. ಇದನ್ನು ದೊಡ್ಡ ಜವಾಬ್ಧಾರಿಯಾಗಿ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು. ಅಲ್ಲದೆ ಚಿತ್ರದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ಪ್ರೇಕ್ಷಕ ಪ್ರಭುಗಳಿಗೆ ಹಾಗೂ ಮಾಧ್ಯಮಗಳಿಗೂ ಧನ್ಯವಾದ ತಿಳಿಸಿದರು.
'ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' 2018ನೇ ಸಾಲಿನ ಅತ್ಯುತ್ತಮ ಮನರಂಜನಾ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.