ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸುದೀರ್ಘ ಆಯಸ್ಸು ಹಾಗೂ ಆರೋಗ್ಯಕರ ಜೀವನ ಸಾಗಿಸುವಂತೆ ಪ್ರಾರ್ಥಿಸುತ್ತೇನೆ. ದೇವರ ಅನುಗ್ರಹ ಸದಾ ಇರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನೂ ಹಲವು ವರ್ಷಗಳ ಕಾಲ ರಾಷ್ಟ್ರ ಸೇವೆಯಲ್ಲಿ ತೊಡಗಲು ದೇವರು ಆಶೀರ್ವದಿಸಲಿ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ಕಠಿಣ ಪರಿಶ್ರಮ ಮತ್ತು ಬದ್ಧತೆಯುಳ್ಳ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನಷ್ಟು ವರ್ಷಗಳ ಕಾಲ ಭಾರತ ಮಾತೆಗೆ ಹೆಚ್ಚು ಸೇವೆ ಸಲ್ಲಿಸಲು ಉಡುಪಿ ಶ್ರೀ ಕೃಷ್ಣ ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಜೀವನವನ್ನು ಆಶೀರ್ವದಿಸಲಿ ಎಂದು ಪ್ರಾರ್ಥಿಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.