ಬೆಂಗಳೂರು:ಚಾಮರಾಜಪೇಟೆಯ ಆರ್ಎಸ್ಎಸ್ ಕಚೇರಿ ಕೇಶವಕೃಪಾದಲ್ಲಿ ರಾಜ್ಯ ಬಿಜೆಪಿ ನಾಯಕರು ಹಾಗೂ ಆರ್ಎಸ್ಎಸ್ ನಾಯಕರ ನಡುವೆ ಮಹತ್ವದ ಸಭೆ ನಡೆಯುತ್ತಿದೆ.
ಆರ್ಎಸ್ಎಸ್ ಜೊತೆ ರಾಜ್ಯ ಬಿಜೆಪಿ ನಾಯಕರ ಮಹತ್ವದ ಸಭೆ..! - kannadanews
ಆರ್ಎಸ್ಎಸ್ ಕಚೇರಿ ಕೇಶವ ಕೃಪಾದಲ್ಲಿ ರಾಜ್ಯ ಬಿಜೆಪಿ ನಾಯಕರು ಹಾಗೂ ಆರ್ಎಸ್ಎಸ್ ನಾಯಕರ ನಡುವೆ ಮಹತ್ವದ ಸಭೆ ನಡೆಯುತ್ತಿದೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ, ಮಾಜಿ ಡಿಸಿಎಂ ಆರ್.ಅಶೋಕ್ ಸೇರಿದಂತೆ ಬಿಜೆಪಿ ಪ್ರಮುಖರು ಭಾಗಿಯಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ನೀಡಲಿರುವ ಬಿಜೆಪಿ ನಾಯಕರು ಪಕ್ಷದ ಮುಂದಿನ ಕಾರ್ಯಚಟುವಟಿಕೆ, ಸದಸ್ಯತ್ವ ಅಭಿಯಾನ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಜಿಂದಾಲ್ಗೆ ಸರ್ಕಾರಿ ಭೂಮಿ ಮಾರಾಟ ವಿರೋಧಿಸಿ ನಡೆಸಿದ ಹೋರಾಟ, ಮುಂದಿನ ನಡೆ ಕುರಿತು ಸಹ ಚರ್ಚೆ ನಡೆಯಲಿದೆ ಎನ್ನಲಾಗಿದೆ.