ಕರ್ನಾಟಕ

karnataka

ಸಚಿವ ಅಶ್ವತ್ಥ್ ​​ನಾರಾಯಣ್ ವಿರುದ್ಧ ಹಲ್ಲೆಗೆ ಮುಂದಾಗಿದ್ದು ಖಂಡನೀಯ: ಕಟೀಲ್

By

Published : Jan 3, 2022, 8:49 PM IST

ರಾಮನಗರದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಗೊಂದಲದ ಗೂಡಾಗಿತ್ತು.

Nalin Kumar Kateel and DK Suresh Kumar
ನಳಿನ್‍ಕುಮಾರ್ ಕಟೀಲ್ ಹಾಗು ಡಿ ಕೆ ಸುರೇಶ್ ಕುಮಾರ್

ಬೆಂಗಳೂರು: ಮುಖ್ಯಮಂತ್ರಿಗಳ ಎದುರೇ ವೇದಿಕೆಯಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್​ನಾರಾಯಣ ಅವರ ಮೇಲೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ಅದೇ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ಹಲ್ಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಪಕ್ಷದವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಅವರದ್ದು ಗೂಂಡಾ ರಾಜಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಎಂಎಲ್‍ಸಿ ಎಸ್.ರವಿ ಅವರು ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದಲ್ಲದೇ ಕಾಂಗ್ರೆಸ್ಸಿಗರು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವ ಮಾದರಿಯಲ್ಲಿ ತಮ್ಮ ತೋಳ್ಬಲದ ರಾಜಕೀಯ ಪ್ರದರ್ಶಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಗೂಂಡಾ ಪ್ರವೃತ್ತಿಗೆ ಕೈಗನ್ನಡಿ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಹಿಂದಿನಿಂದಲೂ ತೋಳ್ಬಲ ಮತ್ತು ಹಣಬಲದಿಂದ ತನ್ನ ಸಾಮರ್ಥ್ಯ ತೋರಿಸುತ್ತಿತ್ತು. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನಗಣ್ಯ ಸ್ಥಿತಿಗೆ ಬಂದಿದೆ. ಜನಪರ ಕಾರ್ಯಕ್ರಮಗಳನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಚಿಂತನೆ ಮತ್ತು ಅನುಷ್ಠಾನವನ್ನು ಗಮನಿಸಿ ಜನರು ದೇಶದೆಲ್ಲೆಡೆ ಬಿಜೆಪಿಯತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ.

ರಾಜ್ಯದಲ್ಲಿ ಬಳಿಕ ನಡೆದ ವಿಧಾನಸಭಾ ಉಪ ಚುನಾವಣೆ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಜನರು ಕಾಂಗ್ರೆಸ್ಸಿಗರ ವಿರುದ್ಧ ಮತ್ತು ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ಪಕ್ಷದವರು ಬುದ್ಧಿ ಕಲಿತಿಲ್ಲ ಎಂದು ಕಟೀಲ್ ತಿಳಿಸಿದರು.

ಇದನ್ನೂ ಓದಿ:ರಾಮನಗರದ ವೇದಿಕೆಯಲ್ಲೇ ಕೈ-ಕಮಲ ಗಲಾಟೆ: ಸಚಿವರ ಆ ಮಾತುಗಳು ಜಟಾಪಟಿಗೆ ಕಾರಣವಾಯ್ತಾ?

TAGGED:

ABOUT THE AUTHOR

...view details