ಕರ್ನಾಟಕ

karnataka

ETV Bharat / state

ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತುಕ್ರಮ: ಯತ್ನಾಳ್​​ಗೆ ಕಟೀಲ್ ಎಚ್ಚರಿಕೆ - Nalin Kumar Kateel tweet

ಪಕ್ಷದಲ್ಲಿ ಅಶಿಸ್ತು ತೋರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಟ್ವೀಟ್​ ಮಾಡುವ ಮೂಲಕ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎನ್ನುವ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Nalin Kumar Kateel tweet
ನಳಿನ್ ಕುಮಾರ್ ಕಟೀಲ್ ಟ್ವೀಟ್​

By

Published : Oct 21, 2020, 1:05 PM IST

ಬೆಂಗಳೂರು:ಪಕ್ಷದಲ್ಲಿ ಅಶಿಸ್ತು ಸಹಿಸುವುದಿಲ್ಲ, ಅಶಿಸ್ತು ತೋರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಳ್​​ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಟ್ವೀಟ್​
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ, ಮುಂದಿನ ಮೂರು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕಟೀಲ್ ಸ್ಪಷ್ಟಪಡಿಸಿದ್ದು,ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details