ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ಮತ್ತು ಐಸಿಸ್ ಸಂಘಟನೆ ಮನಸ್ಥಿತಿ ಎರಡೂ ಒಂದೇ: ಬಿಜೆಪಿ ಟ್ವೀಟ್ - State BJP unit tweet

ರೈತ ಹೋರಾಟಗಾರರನ್ನು ಭಯೋತ್ಪಾದಕರು, ಉಗ್ರಗಾಮಿಗಳು ಎಂದೆಲ್ಲ ದೂಷಿಸುತ್ತಿರುವ ಬಿಜೆಪಿ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ದೆಹಲಿ ರೈತ ಪ್ರತಿಭಟನೆ ಸಂಬಂಧ ಟ್ವೀಟ್ ಮಾಡಿದ್ದರು. ಈ ಸಂಬಂಧ ರಾಜ್ಯ ಬಿಜೆಪಿ ಘಟಕ ಪ್ರತಿ ಟ್ವೀಟ್ ಮಾಡಿ ತಿರುಗೇಟು ನೀಡಿದೆ.

State BJP unit tweete
ಸಿದ್ದರಾಮಯ್ಯ ಮತ್ತು ಐಸಿಸ್ ಸಂಘಟನೆ ಮನಸ್ಥಿತಿ ಎರಡೂ ಒಂದೇ: ಬಿಜೆಪಿ ಟ್ವೀಟ್

By

Published : Dec 3, 2020, 1:38 PM IST

ಬೆಂಗಳೂರು: ಸಿದ್ದರಾಮಯ್ಯ ಮತ್ತು ಐಸಿಸ್ ಉಗ್ರಗಾಮಿ ಸಂಘಟನೆಯ‌ ಮನಸ್ಥಿತಿ ಎರಡೂ ಒಂದೇ ಆಗಿದೆ ಎಂದು ರಾಜ್ಯ ಬಿಜೆಪಿ ಘಟಕ ಕಿಡಿ ಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಇಸ್ಲಾಮಿಕ್‌ ಸ್ಟೇಟ್‌ಗಾಗಿ ಐಸಿಸ್‌, ಮುಸ್ಲಿಂ ಸಮುದಾಯದ ಹೆಸರು ಬಳಸಿಕೊಳ್ಳುತ್ತಿದೆ. ಸಿದ್ದರಾಮಯ್ಯ ಅವರು ತಮ್ಮ ಮೈಲೇಜ್‌ಗಾಗಿ ಮುಸ್ಲಿಂ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಇಬ್ಬರಿಂದಲೂ ಅವಮಾನವಾಗುತ್ತಿರುವುದು ಮುಸ್ಲಿಂ ಸಮುದಾಯಕ್ಕೆ ಎಂದು ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯನವರೇ, ದೊಡ್ಡ ಆಲದ ಮರ ಬಿದ್ದಾಗ ನೆಲ ಕಂಪಿಸುವುದು ಸಹಜʼ ಎಂಬ ಮಾತುಗಳನ್ನು ನೆನಪಿಸಿಕೊಳ್ಳಿ. ಇಂದಿರಾ ಗಾಂಧಿ ಹತ್ಯೆಯ ಬಳಿಕ 84ರಲ್ಲಿ ನಡೆದ ಸಿಖ್‌ ಹತ್ಯಾಕಾಂಡದ ಕುರಿತು ರಾಜೀವ್‌ ಗಾಂಧಿ ನೀಡಿದ್ದ ಹೇಳಿಕೆಯಿದು. ಅಂದು ಸಿಖ್‌ ಸಮುದಾಯವನ್ನು ಅಟ್ಟಾಡಿಸಿ ಕೊಂದ ಕಾಂಗ್ರೆಸ್‌ ಇಂದು ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಟೀಕಿಸಿದೆ.

ಒಂದೆಡೆ ಗಂಭೀರವಾಗಿ ಮಾತುಕತೆಯನ್ನು ನಡೆಸದೆ, ಇನ್ನೊಂದೆಡೆ ರೈತ ಹೋರಾಟಗಾರರನ್ನು ಭಯೋತ್ಪಾದಕರು, ಉಗ್ರಗಾಮಿಗಳು ಎಂದೆಲ್ಲ ದೂಷಿಸುತ್ತಿರುವ ಬಿಜೆಪಿ ಸರ್ಕಾರ ಸಿಖ್ ಸಮುದಾಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ದೆಹಲಿ ರೈತ ಪ್ರತಿಭಟನೆ ಸಂಬಂಧ ಟ್ವೀಟ್ ಮಾಡಿದ್ದರು. ಈ ಸಂಬಂಧ ರಾಜ್ಯ ಬಿಜೆಪಿ ಘಟಕ ಪ್ರತಿ ಟ್ವೀಟ್ ಮಾಡಿ ತಿರುಗೇಟು ನೀಡಿದೆ.

ABOUT THE AUTHOR

...view details