ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಅಂತರ ಕಾಯ್ದುಕೊಂಡು ಸಭೆ ನಡೆಸಲು ಚಿಂತನೆ
ಕೊರೊನಾ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳಿನ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಸಚಿವರು ಪರಸ್ಪರ ಅಂತರ ಕಾಯ್ದುಕೊಂಡು ಸಭೆಯಲ್ಲಿ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಅಂತರ ಕಾಯ್ದುಕೊಂಡು ಸಂಪುಟ ಸಭೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.
ಕೊರೊನಾ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಂಪುಟ ಸಚಿವರು ಪರಸ್ಪರ ಅಂತರ ಕಾಯ್ದುಕೊಂಡು ಸಭೆಯಲ್ಲಿ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆ ಸಮ್ಮೇಳನ ಸಭಾಂಗಣಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್ ಬದಲಾಗಿ ಸಮ್ಮೇಳನ ಸಭಾಂಗಣದಲ್ಲಿ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಸಚಿವರ ಮಧ್ಯೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಸಮ್ಮೇಳನ ಸಭಾಂಗಣದಲ್ಲಿ ನಡೆಸುವ ಚಿಂತನೆ ನಡೆದಿದೆ. ಕ್ಯಾಬಿನೆಟ್ ಹಾಲ್‌ನಲ್ಲಿ ಸಭೆ ನಡೆಸಿದರೆ ಪರಸ್ಪರ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯವಾಗಲಿದ್ದು, ಅದಕ್ಕಾಗಿ ದೊಡ್ಡದಾದ ಸಮ್ಮೇಳನ ಸಭಾಂಗಣದಲ್ಲಿ ನಡೆಸಲು ಚಿಂತನೆ ನಡೆದಿದೆ.
ನಿರ್ದಿಷ್ಟ ಅಂತರದಲ್ಲಿ ಸಚಿವರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಿ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಪ್ರಧಾನಿ ಮೋದಿ ಮೊನ್ನೆ ಪರಸ್ಪರ ಅಂತರ ಕಾಯ್ದುಕೊಂಡು ಕೇಂದ್ರ ಸಂಪುಟ ಸಭೆ ನಡೆಸಿದ್ದರು. ಅದನ್ನೇ ರಾಜ್ಯ ಸರ್ಕಾರವೂ ಅನುಸರಿಸಲಿದೆ ಎಂದು ಹೇಳಲಾಗಿದೆ.