ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಿಡಬ್ಲ್ಯುಸಿ ಸದಸ್ಯರೂ ಆಗಿದ್ದ, ರಾಜ್ಯಸಭೆ ಸದಸ್ಯ ರಾಜೀವ್ ಸತವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಕಂಬನಿ ಮಿಡಿದಿದ್ದಾರೆ.
ಮಹಾರಾಷ್ಟ್ರದ ಪ್ರಭಾವಿ ನಾಯಕರಾಗಿದ್ದ ರಾಜೀವ್ ಕೋವಿಡ್ನಿಂದ ನಿಧನ ಹೊಂದಿರುವ ಸುದ್ದಿ ಆಘಾತಕಾರಿ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.