ಬೆಂಗಳೂರು: ಕೋವಿಡ್-19 ಬಾಧಿಸಿ ನಿಧನರಾದ ಸಂಸದ ಹೆಚ್.ವಸಂತ್ ಕುಮಾರ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ಸೋಂಕಿಗೆ ಬಲಿಯಾದ ಸಂಸದ ವಸಂತ್ ಕುಮಾರ್: ರಾಜ್ಯ ಕಾಂಗ್ರೆಸ್ ನಾಯಕರ ಸಂತಾಪ - MP Vasanth Kumar
ಕನ್ಯಾಕುಮಾರಿ ಸಂಸದ ಹೆಚ್.ವಸಂತಕುಮಾರ್ ಅವರು ಕೋವಿಡ್ -19 ಕಾರಣದಿಂದಾಗಿ ಅಕಾಲಿಕ ನಿಧನರಾಗಿದ್ದು ಆಘಾತಕಾರಿ ಎಂದು ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.
ಕೊರೊನಾಗೆ ಬಲಿಯಾದ ಸಂಸದ ವಸಂತ್ ಕುಮಾರ್
ರಾಜ್ಯ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಸಂಸದರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ವಸಂತ ಕುಮಾರ್ ಅವರು ಕಾಂಗ್ರೆಸ್ ಸಿದ್ಧಾಂತಕ್ಕೆ ಬದ್ಧರಾಗಿದ್ದು, ಜನಸೇವೆಯಲ್ಲಿ ತೊಡಗಿದ್ದರು. ಅವರ ಆತ್ಮಕ್ಕೆ ಶಾಂತಿ ಲಭಿಸಲಿ, ಕುಟುಂಬ ವರ್ಗ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಟ್ವೀಟ್‌ನಲ್ಲಿ ಹೇಳಿದೆ.