ಬೆಂಗಳೂರು :ರಾಜ್ಯ ಕಾಂಗ್ರೆಸ್ ನಾಯಕರುಗಳು ನಾಡಿನ ಸಮಸ್ತ ಜನತೆಗೆ ಟ್ವೀಟ್ ಮೂಲಕ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಜನತೆಗೆ ಮವನಿ ಮಾಡಿದ್ದಾರೆ.
ಮಾಜಿ ಸಚಿವ ಎಂ ಬಿ ಪಾಟೀಲ್ ತಮ್ಮ ಟ್ವೀಟ್ನಲ್ಲಿ, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ದಯವಿಟ್ಟು ಎಲ್ಲರೂ ಮನೆಯಲ್ಲೇ ಉಳಿದು ಸರಳವಾಗಿ ಹಬ್ಬ ಆಚರಿಸುವ ಮೂಲಕ ಸಂಯಮ, ಜವಾಬ್ದಾರಿಯಿಂದ ವರ್ತಿಸಬೇಕೆಂದು ನಿಮ್ಮೆಲ್ಲರಲ್ಲಿ ವಿನಂತಿ ಎನ್ನುವ ಜಾಗೃತಿ ಸಂದೇಶ ನೀಡಿದ್ದಾರೆ.
ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ತಮ್ಮ ಟ್ವೀಟ್ನಲ್ಲಿ ಯುಗಾದಿಯು ನಮ್ಮೆಲ್ಲರೊಳಗೆ ಹೊಸ ಹುಮ್ಮಸ್ಸನ್ನು ಹುಟ್ಟಿಸಿ ಎಲ್ಲ ಸಂಕಷ್ಟಗಳನ್ನೂ ನಿವಾರಿಸುವ ಶಕ್ತಿ ನೀಡಲಿ. ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಮನೆಯೊಳಗಿದ್ದು, ಹಬ್ಬವನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಆಚರಿಸಿ ಎಂದು ಎಚ್ಚರಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಕಹಿಯಾದ ಬೇವಿನ ಅಂಚಿನಲ್ಲಿ ಬೆಲ್ಲದ ಸಿಂಚನ ಸಿಗಲಿ, ರಾಜ್ಯದ ಜನರ ಬಾಳಲ್ಲಿ ಹೊಸ ಚೇತನ, ಹೊಸ ಉತ್ಸಾಹ,ಆರೋಗ್ಯ ಹಾಗೂ ನೆಮ್ಮದಿ ಸಿಗಲಿ. ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು ಎಂದಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. ಮನೆಯಲ್ಲಿ ಸುರಕ್ಷಿತವಾಗಿ ಯುಗಾದಿ ಆಚರಣೆ ಮಾಡಿ. ಕೊರೊನಾ ವೈರಸ್ ಸೋಂಕು ಹರಡದಂತೆ ಎಚ್ಚರವಹಿಸಿ ಮತ್ತು ಜಾಗೃತಿ ಮೂಡಿಸುವ ಜವಾಬ್ದಾರಿ ನಿರ್ವಹಿಸೋಣ ಎಂದಿದ್ದಾರೆ.