ಕರ್ನಾಟಕ

karnataka

ETV Bharat / state

ವಾಕ್​ ಸ್ವಾತಂತ್ರ್ಯಕ್ಕೆ ಧಕ್ಕೆ ಆರೋಪ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​​​​ ಆಕ್ರೋಶ - ಕಾಂಗ್ರೇಸ್ ವಾಕ್ ಸ್ವಾತಂತ್ರದ ಟ್ವೀಟ್

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್​ಡಿಎ ಸರ್ಕಾರ ಜನರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡಿದೆ.

ಕಾಂಗ್ರೆಸ್ ಟ್ವೀಟ್

By

Published : Nov 3, 2019, 12:25 PM IST

ಬೆಂಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್​ಡಿಎ ಸರ್ಕಾರ ಜನರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿ 2 ಡಜನ್ ಶಿಕ್ಷಣ ತಜ್ಞರು, ವಕೀಲರು ದಲಿತ ಕಾರ್ಯಕರ್ತರು ಹಾಗೂ ಪತ್ರಕರ್ತರ ಮೇಲೆ ಕೇಂದ್ರ ಸರ್ಕಾರವು ಇಸ್ರೇಲ್ ತಂತ್ರಜ್ಞಾನ ಬಳಸಿ ಕಣ್ಗಾವಲು ಇಟ್ಟಿದೆ. ಇದೊಂದು ಆಘಾತಕಾರಿ ವಿಚಾರವಾಗಿದ್ದು, ವಾಕ್ ಸ್ವಾತಂತ್ರ್ಯವನ್ನು ತಡೆಯುವ ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಹೇಳಿದೆ. ಕೇಂದ್ರ ಸರ್ಕಾರದ ಮೇಲೆ ಈಗ ಕೇಳಿ ಬಂದಿರುವ ಆರೋಪ ಅತ್ಯಂತ ಆಘಾತಕಾರಿಯಾಗಿದ್ದಾಗಿದೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದೆ.

ಖ್ಯಾತ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಮೂಲಕ ಕೇಂದ್ರ ಸರ್ಕಾರ ಗೂಢಚಾರ ಮಾಡುತ್ತಿದ್ದು, ಇದಕ್ಕಾಗಿ ಇಸ್ರೇಲ್ ದೇಶದ ನೆರವು ಪಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಈಗ ಕಾಂಗ್ರೆಸ್ ಪಕ್ಷ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ABOUT THE AUTHOR

...view details