ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು, 1,849 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 26 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿಂದು 1849 ಕೊರೊನಾ ಕೇಸ್ ಪತ್ತೆ: 26 ಮಂದಿ ಬಲಿ - ರಾಜ್ಯದ ಕೊರೊನಾ ಪ್ರಕರಣಗಳ ವರದಿ
ರಾಜ್ಯದ ಕೊರೊನಾ ಪ್ರಕರಣಗಳ ವರದಿ ಇಲ್ಲಿದೆ.
ರಾಜ್ಯದಲ್ಲಿಂದು 1849 ಕೊರೊನಾ ಕೇಸ್
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 25,169ಕ್ಕೆ ಏರಿಕೆಯಾಗಿದೆ. ಇಂದು 1,800 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 8,30,988 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 11,604ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 598 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರಿನಲ್ಲಿ 1048 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ. 881 ಮಂದಿ ಗುಣಮುಖರಾಗಿದ್ದಾರೆ.