ಬೆಂಗಳೂರು : ರಾಜ್ಯದಲ್ಲಿಂದು 56,825 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 257 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,95,857ಕ್ಕೆ ಏರಿಕೆ ಆಗಿದೆ.
ಇತ್ತ 205 ಮಂದಿ ಡಿಸ್ಚಾರ್ಜ್ ಆಗಿದ್ದು, 29,50,747 ಮಂದಿ ಗುಣಮುಖರಾಗಿದ್ದಾರೆ. ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,203ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣ 6,878 ರಷ್ಟಿವೆ.
ಈ ಮೂಲಕ ಸೋಂಕಿತರ ಪ್ರಮಾಣ ಶೇ.0.45% ರಷ್ಟಿದ್ದರೆ, ಸಾವಿನ ಪ್ರಮಾಣ 1.94%ರಷ್ಟು ದಾಖಲಾಗಿದೆ. ವಿಮಾನ ನಿಲ್ದಾಣದಿಂದ 10,066 ಪ್ರಯಾಣಿಕರು ಆಗಮಿಸಿದ್ದು, ಯುಕೆಯಿಂದ ಬಂದ 1554 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.