ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಆತಂಕ ಹೆಚ್ಚಿಸಿದ Covid ದಿಢೀರ್ ಏರಿಕೆ.. ಆರೋಗ್ಯ ಇಲಾಖೆ ಆಯುಕ್ತರು ಹೇಳೋದೇನು..?

ಕೇರಳದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ನಡುವೆ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ ಕಂಡಿದೆ. ಇದೀಗ ರಾಜ್ಯದಲ್ಲಿ 3ನೇ ಅಲೆಯ ಆತಂಕ ಎದುರಾಗಿದ್ದು, ಈ ಕುರಿತು ಆರೋಗ್ಯ ಇಲಾಖೆ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ಕೋವಿಡ್ ಸಂಖ್ಯೆ ದಿಢೀರ್ ಏರಿಕೆ
ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ಕೋವಿಡ್ ಸಂಖ್ಯೆ ದಿಢೀರ್ ಏರಿಕೆ

By

Published : Jul 31, 2021, 3:47 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ನ 3ನೇ ಅಲೆ ಎಂಟ್ರಿಯಾಗಿದ್ಯಾ..? ಎಂಬ ಅನುಮಾನ ಆರಂಭವಾಗಿದ್ದು, ನಿನ್ನೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಈ ನಡುವೆ ಕೇರಳದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಆರೋಗ್ಯ ಇಲಾಖೆ ಆಯುಕ್ತರು ಹೇಳೋದೇನು..?
ಮೂರನೇ ಅಲೆ ಕುರಿತಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕಚಂದ್ರ ಮಾತನಾಡಿ, ಒಂದು ದಿನದ ಸೋಂಕಿತರ ಏರಿಕೆಯಿಂದ ಮೂರನೇ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ.ಇಳಿಕೆಯಲ್ಲಿದ್ದ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಲೇ ಹೋದರೆ ಆಗ 3ನೇ ಅಲೆ ಪ್ರವೇಶಿಸಿದೆ ಅಂತ ಹೇಳಬಹುದು ಎಂದಿದ್ದಾರೆ. ಸದ್ಯ, ಕೇರಳದಲ್ಲಿ ಸೋಂಕು ಹರಡುವಿಕೆ ಹೆಚ್ಚಾಗಿರುವುದರಿಂದ ಕರ್ನಾಟಕದಲ್ಲೂ ಏರಿಕೆಯಾಗುವ ಸಾಧ್ಯತೆ ಇದ್ದೇ ಇದೆ ಎಂದರು.
3ನೇ ಅಲೆ ತಡೆಯಲು ಜನರಿಂದಲ್ಲೇ ಸಾಧ್ಯ

ಕೊರೊನಾ 3ನೇ ಅಲೆಯನ್ನ ನಿಯಂತ್ರಿಸಲು ಜನರಿಂದಲೇ ಸಾಧ್ಯವಾಗುತ್ತೆ. ಕೋವಿಡ್ ಹರಡದಂತೆ ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ವಚ್ಛತೆ ಕಡೆ ಗಮನಹರಿಸುವುದು ಬಹಳ ಮುಖ್ಯ ಎಂದು ಆರೋಗ್ಯ ಇಲಾಖೆ ಆಯುಕ್ತರು ಹೇಳಿದ್ದಾರೆ.

ಜೊತೆಗೆ ಈಗಾಗಲೇ 3ನೇ ಅಲೆ ಎದುರಿಸಲು ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗಿದೆ. ಜೊತೆಗೆ ಬೇಕಾದ ಔಷಧ ಸಂಗ್ರಹವನ್ನೂ ಮಾಡಲಾಗಿದೆ. ಐಸಿಯು, ಆಕ್ಸಿಜನ್ ಬೆಡ್ ವ್ಯವಸ್ಥೆಯನ್ನ ಮಾಡಲಾಗಿದೆ ಎಂದು ಆಯುಕ್ತರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details