ಬೆಂಗಳೂರು: ರಾಜ್ಯದಲ್ಲಿ ಗುರುವಾರ 36,289 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 858 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇಂದು 682 ಮಂದಿ ಬಿಡುಗಡೆ ಆಗಿದ್ದು, ಇಲ್ಲಿಯತನಕ ಒಟ್ಟು 39,18,452 ಮಂದಿ ಗುಣಮುಖರಾಗಿದ್ದಾರೆ. ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 5,067 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 2.36 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 3.63 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಜನರ ಸಂಖ್ಯೆ 66,83,7154. ವಾರದ ಸಾವಿನ ಪ್ರಮಾಣ ಶೇ. 0.08 ರಷ್ಟಿದೆ. ವಿಮಾನ ನಿಲ್ದಾಣದಿಂದ ತಪಾಸಣೆಗೆ 5,662 ಮಂದಿ ಒಳಗಾಗಿದ್ದು, ಇದುವರೆಗೂ 10,99,897 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.