ಕರ್ನಾಟಕ

karnataka

ETV Bharat / state

ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ - State Government news

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿರುವ ಸರ್ಕಾರ, ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಹಾಕಿದೆ.

State Government
ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ

By

Published : Jun 6, 2020, 11:14 PM IST

ಬೆಂಗಳೂರು:ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ ‌ಮಾಡಿದೆ.

ಮೊಹಮ್ಮದ್ ಮೊಹ್ಸಿನ್, ರಾಜೇಂದ್ರ ಕುಮಾರ್ ಕಟಾರಿಯಾ, ಗಂಗಾ ರಾಮ್​​ ಬಡೇರಿಯಾರನ್ನು ವರ್ಗಾಯಿಸಲಾಗಿದ್ದರೆ, ಮಂಜುನಾಥ್ ಪ್ರಸಾದ್, ರಾಜ್ ಕುಮಾರ್ ಖತ್ರಿ, ಟಿ.ಕೆ.ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ.

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿರುವ ಸರ್ಕಾರ

ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜ್ ಕುಮಾರ್ ಖತ್ರಿಗೆ ಕೃಷಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಇನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್​ಗೆ ವಿಪತ್ತು ನಿರ್ವಹಣೆ, ಭೂಮಿ, ಯುಪಿಒಆರ್ ನ ಪ್ರಧಾನ ಕಾರ್ಯದರ್ಶಿ ಹೆಚ್ಚುವರಿ ಹೊಣೆ ನೀಡಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್​ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಗಂಗಾರಾಮ್​​ ಬಡೇರಿಯಾರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಡಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

ಮೊಹಮ್ಮದ್ ಮೊಹ್ಸಿನ್​ರನ್ನು ಪುನರ್ವಸತಿ ಮತ್ತು ಸ್ಥಳಾಂತರ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ರಾಜೇಂದರ್ ಕುಮಾರ್ ಕಟಾರಿಯಾರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

For All Latest Updates

ABOUT THE AUTHOR

...view details