ಬೆಂಗಳೂರು:ಶಾಲಾ - ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವಿಕೆ ನಿರ್ಬಂಧ ಎತ್ತಿ ಹಿಡಿದಿರುವ ಹೈಕೋರ್ಟ್ ತೀರ್ಪುನ್ನು ನಾವು ಸ್ವಾಗತಿಸುತ್ತೇವೆ ಎಂದು ರಾಜ್ಯ ಸರ್ಕಾರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹೇಳಿದ್ದಾರೆ.
ಸರ್ಕಾರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹೇಳಿಕೆ ರಾಜ್ಯದಲ್ಲಿ ಬಹು ದಿನಗಳಿಂದ ಹಿಜಾಬ್ ವಿವಾದ ನಡೆಯುತ್ತಿತ್ತು. ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದು ಮೂಲಭೂತ ಹಕ್ಕಲ್ಲ ಎಂದು ವಾದ ಮಂಡನೆ ಮಾಡಿದ್ದವು. ಸಂವಿಧಾನದ ಪೀಠಿಕೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಎಂದು ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ ರಾಜ್ಯ ಸರ್ಕಾರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹೇಳಿಕೆ ನೀಡಿದ್ದಾರೆ.
ಓದಿ:ಹಿಜಾಬ್ ಕುರಿತು ತೀರ್ಪು: ಮುಂದಿನ ಕಾನೂನು ಹೋರಾಟದ ಬಗ್ಗೆ ವಕೀಲ ಹೇಳಿದ್ದೇನು?
ಕರ್ನಾಟಕ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪಿನಲ್ಲಿ ನಾಲ್ಕು ಪ್ರಮುಖ ಅಂಶಗಳನ್ನ ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಅತ್ಯವಶ್ಯಕ ಆಚರಣೆ ಅಲ್ಲ ಅಂತ ಹೋಲ್ಡ್ ಮಾಡಿದ್ದಾರೆ. ಶೈಕ್ಷಣಿಕ ಸಂಸ್ಥೆ ಸಮವಸ್ತ್ರ ರೀಝನೇಬಲ್ ರಿಸ್ಟ್ರಿಕ್ಷನ್ ಎಂದಿದ್ದಾರೆ. ಸದ್ಯ ಈ ಕಾಂಟ್ರೋವರ್ಸಿ ಮುಕ್ತಾಯಗೊಂಡಿದೆ. ಯಾವುದಾದರೂ ಒಂದು ಆಚರಣೆ ಅತ್ಯಗತ್ಯ ಆಚರಣೆ ಅನ್ನಬೇಕಾದರೆ ಅದಕ್ಕೆ ಪುರಾವೆ ಕೊಡಬೇಕಾಗುತ್ತದೆ. ಅದನ್ನೂ ಗಣನೆಗೆ ತೆಗೆದುಕೊಂಡು ಪುರಾವೆ ನೀಡದ ಹಿನ್ನಲೆ ಈ ಪ್ರಕರಣ ವಜಾಗೊಳಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮಹತ್ವದ ತೀರ್ಪು ಹೊರಬಿದ್ದಿದೆ. ತರಗತಿಗಳಲ್ಲಿ ಹಿಜಾಬ್ ಧರಿಸುವ ಪರವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.
ಓದಿ:ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯತೆ ಅಲ್ಲ: ಹೈಕೋರ್ಟ್
ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲ ಅರ್ಜಿಗಳನ್ನು ತ್ರಿಸದಸ್ಯ ಪೀಠ ವಜಾ ಮಾಡಿ ಆದೇಶ ಮಾಡಿದೆ. 11 ದಿನಗಳ ವಿಚಾರಣೆ ಬಳಿಕ ಫೆಬ್ರವರಿ 25ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿತ್ತು. ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಈ ತೀರ್ಪು ಪ್ರಕಟಿಸಿದೆ.