ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.
ಪುಣ್ಯಕೋಟಿ ದತ್ತು ಯೋಜನೆಗೆ 100 ಕೋಟಿ ದೇಣಿಗೆ ಕೊಟ್ಟ ರಾಜ್ಯ ಸರ್ಕಾರಿ ನೌಕರರು - State government employees
ಗೋ ಸಂಕುಲವನ್ನ ಸಂರಕ್ಷಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ಒಂದು ದಿನದ ವೇತನ (100 ಕೋಟಿ ರೂ.) ದೇಣಿಗೆ ನೀಡಿದ್ದಾರೆ.
ಒಂದು ದಿನದ ವೇತನ ದೇಣಿಗೆ ನೀಡಿದ ರಾಜ್ಯ ಸರ್ಕಾರಿ ನೌಕರರು
ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, 100 ಕೋಟಿ ರೂ.ಗಳ ದೇಣಿಗೆಯನ್ನ ಸಂಘದ ಪರವಾಗಿ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ಸಿಗದ ನಿರೀಕ್ಷಿತ ಆರಂಭಿಕ ಜನಸ್ಪಂದನೆ