ಬೆಂಗಳೂರು:ರಾಜ್ಯಾದ್ಯಂತ ಕೊರೊನಾ ವೈರಸ್ ಸಾಂಕ್ರಾಮಿಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳು ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶಗಳನ್ನು ಹೊರಡಿಸುವಂತಿಲ್ಲ. ಒಂದು ವೇಳೆ ಹೊರಡಿಸಿದ್ದಲ್ಲಿ ಆದೇಶವನ್ನು ಹಿಂಪಡೆಯುವಂತೆ ಎಲ್ಲಾ ಆಡಳಿತ ಇಲಾಖೆಗಳಿಗೆ ಆರ್ಥಿಕ ಇಲಾಖೆ ನಿರ್ದೇಶನ ನೀಡಿತ್ತು.
ಆದರೆ ಕೆಲವು ಇಲಾಖೆಗಳಲ್ಲಿನ ಮುಂದುವರೆದ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಅಗತ್ಯವಾಗಿರುವುದನ್ನು ಅರ್ಥಿಕ ಇಲಾಖೆ ಮನಗಂಡಿದೆ. ಲಾಕ್ಡೌನ್ನಿಂದಾಗಿ ರಾಜ್ಯದ ಸಂಪನ್ಮೂಲ ಸಂಗ್ರಹ ಸ್ಥಗಿತವಾಗಿರುವುದರಿಂದ ಹಾಗೂ ಲಾಕ್ಡೌನ್ ತೆರವುಗೊಳಿಸಿದರೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಕಷ್ಟು ಕಾಲಾವಕಾಶ ಬೇಕಾಗಿರುವುದರಿಂದ ಸರ್ಕಾರವು ವೆಚ್ಚವನ್ನು ಆದ್ಯತೆಗೆ ಅನುಸಾರವಾಗಿ ಮಾಡಬೇಕಾಗುತ್ತದೆ. ಹಾಗಾಗಿ ಎಲ್ಲಾ ಆಡಳಿತ ಇಲಾಖೆಗಳಿಗೂ ಈ ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
1. ಎಲ್ಲಾ ಮುಂದುವರೆದ ಯೋಜನೆಗಳನ್ನು ಅವಶ್ಯಕತೆಗನುಣವಾಗಿ ಅನುಷ್ಠಾನಗೊಳಿಸಬೇಕಾಗಿದ್ದಲ್ಲಿ ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆಯಬೇಕು.