ಬೆಂಗಳೂರು: ಕೊರೊನಾ ವೈರಸ್ ಪ್ರಕರಣಗಳು ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ 18 ಜಿಲ್ಲಾ ಮಟ್ಟದ ಆಸ್ಪತ್ರೆಗಳನ್ನು ಬಲಪಡಿಸಬೇಕಿದೆ. ಹೀಗಾಗಿ, ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಆರು ತಿಂಗಳ ಮಟ್ಟಿಗೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವವರನ್ನು ಮುಂದುವರೆಸುವಂತೆ ಸರ್ಕಾರ ಆದೇಶಿಸಿದೆ.
ತಾತ್ಕಾಲಿಕವಾಗಿ ನೇಮಕಗೊಂಡಿದ್ದ ವೈದ್ಯಕೀಯ ಸಿಬ್ಬಂದಿ ಸೇವಾವಧಿ ವಿಸ್ತರಣೆ - ಬೆಂಗಳೂರು ಸುದ್ದಿ
ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವವರ ಸೇವೆಯನ್ನು ಮುಂದುವರೆಸುವಂತೆ ಸರ್ಕಾರ ಆದೇಶಿಸಿದೆ.
ತಾತ್ಕಾಲಿಕವಾಗಿ ನೇಮಕಗೊಂಡಿದ್ದ ಸಿಬ್ಬಂದಿಗಳ ಅವಧಿ ವಿಸ್ತರಣೆ
ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ 45 ಹುದ್ದೆಗಳನ್ನು (10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗ ಶಾಲಾ ತಂತ್ರಜ್ಞರು, 10 ಡಿ ಗ್ರೂಪ್ ) ಡಿಸೆಂಬರ್ 31 ರವರೆಗೆ ಮುಂದುವರೆಸಲು ಸರ್ಕಾರ ತೀರ್ಮಾನಿಸಿದೆ.