ಬೆಂಗಳೂರು: ಬೆಳಗಾವಿ ಗಡಿ ವಿವಾದದ ಸಲುವಾಗಿ ಕನ್ನಡಿಗರು ಹಾಗೂ ಮರಾಠ ಭಾಷಿಕರ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಾಜಿ ಶಾಸಕ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಎಂ.ಜಿ.ಮುಳೆ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ಸ್ಥಾನಮಾನ ನೀಡಲಾಗಿದೆ. ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಆದೇಶ - Etv Bharat Kannada
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಎಂ.ಜಿ.ಮುಳೆ ಅವರಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸೌಧ