ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್​ : ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರದ ಆದೇಶ - ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಶುಭಸುದ್ದಿ ನೀಡಿದ್ದು, ಹಬ್ಬದ ಪ್ರಯುಕ್ತ ತುಟ್ಟಿಭತ್ಯೆ ಹೆಚ್ಚಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ಭತ್ಯೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

state-government-orders-increase-in-dearness-allowance
ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

By

Published : Oct 27, 2021, 2:09 PM IST

ಬೆಂಗಳೂರು:ರಾಜ್ಯ ಸರ್ಕಾರಿ ನೌಕರರಿಗೆ ಬೆಳಕಿನ ಹಬ್ಬ ದೀಪಾವಳಿಗೆ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ತುಟ್ಟಿಭತ್ಯೆಯನ್ನ ಶೇ.3ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ಡಿಎ ಹೆಚ್ಚಳ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ
ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

ಸರ್ಕಾರಿ ನೌಕರರ ಮೂಲವೇತನದಲ್ಲಿ ಪ್ರತಿಶತ 3ರಷ್ಟು ಡಿಎ ಏರಿಕೆ ಮಾಡಲಾಗಿದೆ. ಸದ್ಯ ಮೂಲವೇತನ ಆಧರಿಸಿ ಶೇಕಡಾ 21.50ರಷ್ಟು ತುಟ್ಟಿ ಭತ್ಯೆ ನೀಡಲಾಗುತ್ತಿದ್ದು, ಹೊಸದಾಗಿ ಡಿಎ ಹೆಚ್ಚಳದಿಂದ ಮಾಡಿದ್ದರಿಂದ ಇನ್ನುಮುಂದೆ ನೌಕರರು ಮೂಲ ವೇತನದ ಶೇ. 24.50ರಷ್ಟು ಡಿಎ ಪಡೆಯಲಿದ್ದಾರೆ.

ನಿವೃತ್ತ ಸರ್ಕಾರಿ ನೌಕರರಿಗೂ ಶೇ.3ರಷ್ಟು ಡಿಎ ಹೆಚ್ಚಳ ಆದೇಶ ಅನ್ವಯವಾಗಲಿದೆ.

ಇದನ್ನೂ ಓದಿ:'ಮೊಬೈಲ್ ಫೋನ್​ ಮಾರಿ ಅಂತ್ಯಕ್ರಿಯೆ ನೆರವೇರಿಸಿ': ಡೆತ್​ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ​

ABOUT THE AUTHOR

...view details