ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಘೋಷಿಸಿರುವ ರಾಜ್ಯ ಸರ್ಕಾರದ ಪ್ಯಾಕೇಜ್ ಸಂಕಷ್ಟದಲ್ಲಿರುವ ಎಲ್ಲ ಜನರಿಗೆ ನೆರವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ರಾಜ್ಯ ಸರ್ಕಾರದ ಪ್ಯಾಕೇಜ್ ಎಲ್ಲರಿಗೂ ನೆರವಾಗಲಿದೆ: ವೈದ್ಯಕೀಯ ಶಿಕ್ಷಣ ಸಚಿವ - ಲಾಕ್ಡೌನ್ ಸುದ್ದಿ
ಲಾಕ್ ಡೌನ್‌ನಿಂದಾಗಿ ತೊಂದರೆ ಎದುರಿಸುತ್ತಿರುವ ಎಲ್ಲ ವರ್ಗದ ಜನರಿಗೆ ನೆರವಾಗಲು 1,610 ಕೋಟಿ ರೂ. ಮೊತ್ತದ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಲಾಕ್ ಡೌನ್ ನಿಂದಾಗಿ ತೊಂದರೆ ಎದುರಿಸುತ್ತಿರುವ ಎಲ್ಲ ವರ್ಗದ ಜನರಿಗೆ ನೆರವಾಗಲು 1,610 ಕೋಟಿ ರೂ. ಮೊತ್ತದ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ. ನೇಕಾರರ ಸಮ್ಮಾನ್ ಯೋಜನೆ, ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ ಸಹಾಯಧನ, ಉದ್ದಿಮೆಗಳ ಉತ್ತೇಜನ ಸೇರಿದಂತೆ ಹಲವು ಮಹತ್ವಪೂರ್ಣ, ಜನಪರ ಘೋಷಣೆಗಳನ್ನು ಮಾಡಿದ್ದಾರೆ. ಇದೆಲ್ಲಾ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯವಾಗಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ನಿಮ್ಮೊಂದಿಗೆ, ನಿಮಗಾಗಿ ಇದೆ. ಜನರು ಯಾವುದೇ ಆತಂಕಕ್ಕೆ ಒಳಗಾಗದೆ, ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕಾಗಿದೆ. ಕೋವಿಡ್ -19 ನಿಯಂತ್ರಣಕ್ಕಾಗಿ ಜನರ ಸಂಪೂರ್ಣ ಸಹಕಾರ ಅತ್ಯಗತ್ಯ ಎಂದು ಸಹಕಾರದ ಮನವಿ ಮಾಡಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಎಂಬ ಭರವಸೆ ನೀಡಿದ್ದಾರೆ ಎಂದು ಸುಧಾಕರ್ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.