ಬೆಂಗಳೂರು:ರೈತ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಿದೆ. ಆದರೆ ಇತ್ತ ರಾಜ್ಯ ಸರ್ಕಾರ ಕೇಂದ್ರದ ಕಾಯ್ದೆ ಅನ್ವಯ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಲು ಒಲವು ಹೊಂದಿಲ್ಲ.
ರೈತರ ನಿರಂತರ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದೆ. ಇದೀಗ ರಾಜ್ಯ ಸರ್ಕಾರವೂ ರಾಜ್ಯದಲ್ಲಿ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ರಾಜ್ಯ ಸರ್ಕಾರ ಕೇಂದ್ರದ ಕಾಯ್ದೆ ಅನ್ವಯ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಆದರೆ, ಆದರಂತೆ ವರ್ತಕರು ನೇರವಾಗಿ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಎಪಿಎಂಸಿ ಪ್ರಾಂಗಣಗಳ ಹೊರಗೆ ನಡೆಯುವ ಕೃಷಿ ಉತ್ಪನ್ನಗಳ ಮಾರಾಟದ ಮೇಲೆ ಸೆಸ್ ವಿಧಿಸುವುದನ್ನು ರದ್ದುಪಡಿಸಲಾಗಿದೆ. ಎರಡು ಬಾರಿ ಸುಗ್ರೀವಾಜ್ಞೆ ಹೊರಡಿಸಿ ಕೊನೆಗೆ ವಿಧಾನಮಂಡಲದ ಒಪ್ಪಿಗೆ ಪಡೆದು ಕಾಯಿದೆ ಜಾರಿಯಾಗಿದೆ. ಕಳೆದ ಡಿಸೆಂಬರ್ನಲ್ಲಿ ರೈತರ ವಿರೋಧದ ಮಧ್ಯೆ ರಾಜ್ಯ ಸರ್ಕಾರ ಈ ವಿವಾದಿತ ಕಾಯ್ದೆಯನ್ನು ಜಾರಿಗೆ ತಂದಿತ್ತು.
ಕೇಂದ್ರ ಜಾರಿಗೊಳಿಸಿದ್ದ ಕೃಷಿ ಉತ್ಪನ್ನಗಳ ವ್ಯಾಪಾರ ಮತ್ತು ಮಾರಾಟ (ಉತ್ತೇಜನ- ಸೌಲಭ್ಯ) ಕಾಯ್ದೆ (ಕೃಷಿ ಮಾರುಕಟ್ಟೆ ಕಾಯ್ದೆ)ಯಂತೆ ರಾಜ್ಯ ಸರಕಾರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಕಾಯ್ದೆಯನ್ನು ಕಳೆದ ಡಿಸೆಂಬರ್ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಕೃಷಿ ಮಾರುಕಟ್ಟೆ ಕಾಯ್ದೆಯನ್ನು ರದ್ದುಗೊಳಿಸಿದೆ. ರಾಜ್ಯ ಸರ್ಕಾರವೂ ಅದೇ ರೀತಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವಂತೆ ರೈತರು ಆಗ್ರಹಿಸಿದ್ದಾರೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ಧತಿ ಅನುಮಾನ: