ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ - ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
![ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಸರ್ಕಾರ ಆದೇಶ](https://etvbharatimages.akamaized.net/etvbharat/prod-images/768-512-14167843-thumbnail-3x2-tops.jpg)
ಸರ್ಕಾರ ಆದೇಶ
ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
- ಮೋಹನ್ ರಾಜ್ ಕೆ.ಪಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.
- ಶರತ್ ಬಿ- ವಿಶೇಷ ಆಯುಕ್ತರು (ಕಲ್ಯಾಣ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು.
- ಡಾ.ರವಿ ಎಂ.ಆರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, ಬೆಂಗಳೂರು.
- ಅನಿಲ್ ಕುಮಾರ್ ಬಿ.ಹೆಚ್- ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ, ಬೆಂಗಳೂರು ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆಗೆ ಪ್ರಭಾರ ವಹಿಸಲಾಗಿದೆ.
- ಡಾ. ಸೆಲ್ವಮಣಿ ಆರ್ - ಜಿಲ್ಲಾಧಿಕಾರಿ, ಶಿವಮೊಗ್ಗ ಜಿಲ್ಲೆ