ಕರ್ನಾಟಕ

karnataka

ETV Bharat / state

ರಾಜ್ಯದ ಶೇ.92 ರಷ್ಟು ಗ್ರಾಮಗಳಲ್ಲಿ ಸ್ಮಶಾನಕ್ಕೆ ಸ್ಥಳ ಒದಗಿಸಲಾಗಿದೆ.. ಹೈಕೋರ್ಟ್​ಗೆ ಸರ್ಕಾರದ ವರದಿ - ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್

ರಾಜ್ಯದಲ್ಲಿರುವ ಒಟ್ಟು ಗ್ರಾಮಗಳ ಪೈಕಿ, 27,458 ಗ್ರಾಮಗಳಿಗೆ ಸ್ಮಶಾನಕ್ಕೆ ಜಾಗ ಮಂಜೂರು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

Kn_bng_01
ಹೈಕೋರ್ಟ್

By

Published : Sep 6, 2022, 10:00 PM IST

ಬೆಂಗಳೂರು: ರಾಜ್ಯದ ಶೇ.92ರಷ್ಟು ಗ್ರಾಮೀಣ ಭಾಗಗಳಲ್ಲಿ ಸ್ಮಶಾನ ಜಾಗಗಳನ್ನು ಮಂಜೂರು ಮಾಡಲಾಗಿದೆ ಎಂದು ಸರ್ಕಾರ, ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪಾಲನೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು.

ಈ ಸಂಬಂಧ ಬೆಂಗಳೂರಿನ ನಿವಾಸಿ ಮಹಮ್ಮದ್ ಇಕ್ಬಾಲ್ ಅವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯು ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಹಾಗೂ ನ್ಯಾ.ಕೆ.ಎಸ್.ಹೇಮಲೇಖ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಮಂಗಳವಾರ ಮಾಹಿತಿ ನೀಡಿತು.

ಅಲ್ಲದೆ, ರಾಜ್ಯದಲ್ಲಿ ಒಟ್ಟು 1,141ಸ್ಮಶಾನ ಜಾಗಗಳು ಒತ್ತುವರಿಯಾಗಿವೆ. ಅವುಗಳನ್ನು ಹಂತ ಹಂತವಾಗಿ ತೆರವು ಮಾಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಸಲ್ಲಿಸಿದ ಅನುಪಾಲನಾ ವರದಿಯನ್ನು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಸ್ಮಶಾನ ಜಾಗಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು ಮತ್ತು ಶವ ಸಂಸ್ಕಾರಕ್ಕೆ ಅಗತ್ಯ ಜಮೀನು ಇಲ್ಲದ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಮಂಜೂರು ಮಾಡಬೇಕು ಎಂಬ ನ್ಯಾಯಾಲಯದ ಆದೇಶ ಪಾಲನೆಗೆ ಮೂರು ವಾರ ಕಾಲಾವಕಾಶ ಬೇಕು ಎಂದು ಕೋರಿದರು.

ರಾಜ್ಯದಲ್ಲಿ ಒಟ್ಟು 1,141 ಸ್ಮಶಾನ ಜಾಗಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದ್ದು, ಇಲ್ಲಿವರೆಗೆ 282 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನೂ 859 ಸ್ಮಶಾನ ಜಾಗಗಳ ಒತ್ತುವರಿಯನ್ನು ತೆರವುಗೊಳಿಸಬೇಕಾಗಿದೆ. ಅದೇ ರೀತಿ ರಾಜ್ಯದಲ್ಲಿರುವ ಒಟ್ಟು 29,616 ಗ್ರಾಮಗಳ ಪೈಕಿ 27,458ಗ್ರಾಮಗಳಲ್ಲಿ ಸ್ಮಶಾನ ಜಾಗ ಒದಗಿಸಲಾಗಿದ್ದು, ಶೇ.92ರಷ್ಟು ಸ್ಮಶಾನ ಒದಗಿಸಿದಂತಾಗಿದೆ.

ಇನ್ನುಳಿದ 1,002ಗ್ರಾಮಗಳಿಗೆ ಸ್ಮಶಾನ ಜಾಗ ಒದಗಿಸಬೇಕಾಗಿದೆ. ಇದರಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯ ಸಮಸ್ಯೆ, ವ್ಯಾಜ್ಯಗಳು ಹಾಗೂ ಜಮೀನು ಖರೀದಿ ಮಾಡಬೇಕಾಗಿರುವ ಕಾರಣದಿಂದ 600 ಗ್ರಾಮಗಳಲ್ಲಿ ಸ್ಮಶಾನ ಜಾಗ ಒದಗಿಸಲು ಆಗಿಲ್ಲ ಎಂದು ಸರ್ಕಾರ ಸಲ್ಲಿಸಿದ್ದ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಸ್ಮಶಾನಕ್ಕೆ ತೆರಳಲು ಮಳೆ ಅಡ್ಡಿ.. ಗ್ರಾ ಪಂ ಕಚೇರಿ ಮುಂದೆ ಶವ ಹೂತ ಗ್ರಾಮಸ್ಥರು!

ABOUT THE AUTHOR

...view details