ಕರ್ನಾಟಕ

karnataka

ETV Bharat / state

ಆತ್ಮ ನಿರ್ಭರ ಭಾರತ ಯೋಜನೆ.. ರಾಜ್ಯ ಸರ್ಕಾರದಿಂದ ಶೇ.15 ರಷ್ಟು ಹೆಚ್ಚುವರಿ ಸಹಾಯಧನ - ಪಿಎಂಎಫ್ಎಂಇ ಯೋಜನೆಗೆ ಹೆಚ್ಚಿನ ಸಹಾಯಧನ ನೀಡಿದ ಸರ್ಕಾರ

ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು. ಇದೀಗ ಸರ್ಕಾರ ರೈತರ ಅನುಕೂಲಕ್ಕಾಗಿ ಶೇ.15 ರಷ್ಟು ಹೆಚ್ಚಿನ ಸಹಾಯಧನ ನೀಡಿ ಆದೇಶ ಹೊರಡಿಸಿದೆ.

State govt gave additional subsidy to PMFME scheme
ಪಿಎಂಎಫ್ಎಂಇ ಯೋಜನೆಗೆ ಸಹಾಯಧನ ಹೆಚ್ಚಿಸಿದ ಸರ್ಕಾರ

By

Published : Jan 17, 2022, 4:53 PM IST

ಬೆಂಗಳೂರು : ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು. ಇದೀಗ ಸರ್ಕಾರ ರೈತರ ಅನುಕೂಲಕ್ಕಾಗಿ ಶೇ.15 ರಷ್ಟು ಹೆಚ್ಚಿನ ಸಹಾಯಧನ ನೀಡಿದ್ದು, ಈಗ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ.50 ರಷ್ಟಾಗಿದೆ.

ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಶೇ.35 ರಷ್ಟನ್ನು ಒದಗಿಸಿತ್ತು. ಕಳೆದ ಬಾರಿ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಶೇ.15 ರಷ್ಟು ಸಹಾಯಧನ ನೀಡಿದ್ದು, ಈಗ ಸಹಾಯಧನ ಶೇ.50ಕ್ಕೆ ಏರಿದೆ.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ಅಡಿ ಪಿಎಂಎಫ್ಎಂಇ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆಯನ್ನು ರಾಜ್ಯದ ನೋಡಲ್ ಇಲಾಖೆಯನ್ನಾಗಿಯೂ ಕೆಪೆಕ್ ಸಂಸ್ಥೆಯನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)ಯೋಜನೆಯೂ 5 ವರ್ಷಗಳ ಅವಧಿಯಲ್ಲಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೂ ಜಾರಿಯಲ್ಲಿರುತ್ತದೆ. 2021-22ನೇ ಸಾಲಿನಲ್ಲಿ 2651 ವೈಯಕ್ತಿಕ ಉದ್ದಿಮೆದಾರರಿಗೆ ಹಾಗೂ ಗುಂಪುಗಳಿಗಳಿಗೆ 100 ಉದ್ದಿಮೆಗಳ ಸ್ಥಾಪನೆಗೆ ಸಹಾಯಧನ ಒದಗಿಸುವ ಗುರಿ ಹೊಂದಲಾಗಿದೆ.

ಸರ್ಕಾರ ರೈತರ ಅನುಕೂಲಕ್ಕಾಗಿ ಅನುದಾನ ಹೆಚ್ಚಿಸಿರುವುದನ್ನು ಶ್ಲಾಘಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು, ರೈತಾಪಿ ಗುಂಪುಗಳು ಮತ್ತು ವೈಯಕ್ತಿಕ ಉದ್ದಿಮೆದಾರರು ಯೋಜನೆಯ ಸದುಪಯೋಗ ಪಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರೆದ ಕೊರೊನಾ ಅಬ್ಬರ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭ

For All Latest Updates

TAGGED:

ABOUT THE AUTHOR

...view details