ಕರ್ನಾಟಕ

karnataka

ETV Bharat / state

ಕಾಂಗ್ರೆಸ್​ ನಡೆಗೆ ದಿಢೀರ್​ ಬ್ರೇಕ್​.. ಮೇಕೆದಾಟು ಪಾದಯಾತ್ರೆ ನಿಷೇಧಿಸಿ ಸರ್ಕಾರದಿಂದ ಮಹತ್ವದ ಆದೇಶ

ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸರ್ಕಾರದಿಂದ ಕಾಂಗ್ರೆಸ್​ ಪಕ್ಷಕ್ಕೆ ಸೂಚನೆ ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್​ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

By

Published : Jan 12, 2022, 9:04 PM IST

Updated : Jan 12, 2022, 9:38 PM IST

ಬೆಂಗಳೂರು: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ದಿಢೀರ್​ ಆದೇಶ ಹೊರಡಿಸಿದೆ. ಪಾದಯಾತ್ರೆ ಬಗ್ಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ, ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ಕಾಂಗ್ರೆಸ್‌ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸುವಂತೆ ರಾಮನಗರ ಜಿಲ್ಲಾಧಿಕಾರಿ ಹಾಗೂ ಎಸ್ ಪಿಗೆ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್‌ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಕುರಿತು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಮುಖ್ಯಕಾರ್ಯದರ್ಶಿ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಭೆ ನಡೆಸಿದ್ದು, ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ ಎಂಬ ಕಾರಣದಿಂದ ಮೇಕೆದಾಟು ಪಾದಯಾತ್ರೆಗೆ ಸರ್ಕಾರ ನಿರ್ಬಂಧ ವಿಧಿಸಿದೆ.

ಪಾದಯಾತ್ರೆ ಹೆಸರಿನಲ್ಲಿ ಬೈಕ್ ರ್ಯಾಲಿಗೂ ನಿರ್ಬಂಧ ಹಾಕಲಾಗಿದೆ. ಜಾಥಾ ಹೆಸರಿನಲ್ಲಿ ರಾಮನಗರಕ್ಕೆ ತೆರಳುವ ಹಾಗೂ ಹೊರಗೆ ಹೋಗುವ ವಾಹನಗಳಿಗೂ ನಿಷೇಧ ಹೇರುವಂತೆ ಸಾರಿಗೆ ಆಯುಕ್ತರು ಹಾಗೂ ಜಿಲ್ಲಾಡಳಿತಕ್ಕೆ ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Last Updated : Jan 12, 2022, 9:38 PM IST

For All Latest Updates

TAGGED:

ABOUT THE AUTHOR

...view details